ವಿಜಯಪುರ:ಕೊಟ್ಟ ಹಣ ವಾಪಸ್​ ಕೇಳಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ಜೀಪ್​ ಹರಿಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ನಡೆದಿದೆ.
ಶೋಭಾ ಸೋಮನಿಂಗ ಮೊಗದರೆ (45) ಕೊಲೆಯಾದ ಮಹಿಳೆ. ಸಾಗರ ಖತಾರ ಮತ್ತು ಮಾರುತಿ ಥೋರತ ಕೊಲೆ ಮಾಡಿದ ಆರೋಪಿಗಳು. ಕಬ್ಬು ಕಟಾವು ಮಾಡಲು ಒಂದು ತಂಡವನ್ನು ಕರೆತರುತ್ತೇವೆ ಎಂದು ಕೊಲೆಯಾದ ಮಹಿಳೆಯ ಪತಿ ಸೋಮನಿಂಗನಿಂದ ಆರೋಪಿಗಳು 45 ಲಕ್ಷ ರೂ. ಹಣ ಪಡೆದಿದ್ದರು.
ಹಣ ಪಡೆದ ಬಳಿವೂ ಆರೋಪಿಗಳ ಕಬ್ಬು ಕಟಾವು ಮಾಡುವ ತಂಡವನ್ನು ಕಳುಹಿಸಿರಲಿಲ್ಲ. ಈ ವಿಚಾರಕ್ಕೆ ಹಣ ನೀಡಿದ ಸೋಮನಿಂಗನಿಗೂ ಹಾಗೂಇಬ್ಬರು ಆರೋಪಿಗಳಿಗೂ ವಾಗ್ವಾದ ಆಗಿತ್ತು. ಈ ವೇಳೆ ಕೊಟ್ಟ ಹಣ ವಾಪಸ್ ಕೊಡುವಂತೆ ಕೇಳಿದ್ದಕ್ಕೆ ಕುಪಿತಗೊಂಡ ಆರೋಪಿಗಳು ಸೋಮನಿಂಗ ಇಲ್ಲದ ಸಮಯದಲ್ಲಿ ತೋಟಕ್ಕೆ ಬಂದಿದ್ದರು. ಈ ವೇಳೆ ಜೀಪ್‌ನಿಂದ ಬೆನ್ನಟ್ಟಿ, ಅಟ್ಟಾಡಿಸಿ ಜೀಪ್ ಹರಿಸಿ ಸೋಮನಿಂಗನ ಪತ್ನಿ ಶೋಭಾಳನ್ನು ಕೊಲೆ ಮಾಡಿದ್ದಾರೆ.
ಈ ಸಂಬಂಧ ತಿಕೋಟಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಸಚಿನ್​ಗೂ ವಿಂಡೀಸ್​ ಇದೀಗ ವಿರಾಟ್​ಗೂ ವಿಂಡೀಸ್! ವಿಶೇಷ ದಾಖಲೆ ಬರೆಯಲು ಕೊಹ್ಲಿಗೆ ಬೇಕಿದೆ ಕೇವಲ 6 ರನ್​

ದೇಹದಲ್ಲಿ ಎಷ್ಟು ಮಚ್ಚೆಗಳಿವೆ? ತೆಲುಗಿನ ಮೊದಲ ಚಿತ್ರದಲ್ಲೇ ಕನ್ನಡತಿ ನೇಹಾ ಶೆಟ್ಟಿಗೆ ಮುಜುಗರ

ತನ್ನ ಫೋಟೋ ಮೇಲೆ ಸೆಲೆಬ್ರಿಟಿ ಎಂದು ಬರೆದು ಪೂಜೆ ಮಾಡಿ ಸಾವಿನ ದಾರಿ ಹಿಡಿದ ವ್ಯಕ್ತಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
