ಬೆಂಗಳೂರು:ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬೆಳ್ಳಂಬೆಳಗ್ಗೆ‌ ಅಗ್ನಿ ಅವಘಡ ಸಂಭವಿಸಿದ್ದು, ಠಾಣೆಯ ಒಂದಷ್ಟು‌ ಕಡತಗಳು ಬೆಂಕಿಗೆ ಆಹುತಿಯಾಗಿವೆ. ಸದ್ಯ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕದಳ ಯಶಸ್ವಿಯಾಗಿದೆ.
ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಶಾರ್ಟ್ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆದರೂ ಒಂದಷ್ಟು‌ ಕಡತಗಳು ಬೆಂಕಿಗಾಹುತಿ ಆಗಿವೆ.
ಹಳೆಯ ಕಡತಗಳು, ಪೀಠೋಪಕರಣ ಹಾಗೂ ಕಂಪ್ಯೂಟರ್​ಗಳನ್ನ ಇರಿಸಲಾಗಿದ್ದ ಕೊಠಡಿಯಲ್ಲಿ ಈ ಅವಘಡ ಸಂಭವಿಸಿದೆ. ಅದೇ ಕೊಠಡಿಯಲ್ಲಿ ಯುಪಿಎಸ್ ಇಡಲಾಗಿತ್ತು. ಶಾರ್ಟ್ ಸರ್ಕ್ಯೂಟಿನಿಂದ ಯುಪಿಎಸ್​ಗೆ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಈ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರು ಮಾಹಿತಿ ನೀಡಿದ್ದು, ವಿಲ್ಸನ್ ಗಾರ್ಡನ್ ಠಾಣೆಯ ಬಲಭಾಗದಲ್ಲಿದ್ದ ಕೊಠಡಿಯಲ್ಲಿ‌ ಅವಘಡ ಸಂಭವಿಸಿದೆ. ಹಳೆಯ ಕಡತಗಳು ಹಾಗೂ ಜಪ್ತಿಯಾದ ಕೆಲ ವಸ್ತುಗಳನ್ನ ಇರಿಸಲಾಗಿತ್ತು. ಅದೇ ಕೊಠಡಿಯಲ್ಲಿ ಯುಪಿಎಸ್ ಇಡಲಾಗಿತ್ತು. ಇಂದು ಬೆಳಗ್ಗೆ 5:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕದಳದವರು‌ ಬೆಂಕಿ ಆರಿಸಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟಿನಿಂದ ಅವಘಡ ಸಂಭವಿಸಿದಂತಿದೆ. ಘಟನೆಯ ಕುರಿತು ವರದಿ ನೀಡುವಂತೆ ಎಸಿಪಿಯವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.(ದಿಗ್ವಿಜಯ ನ್ಯೂಸ್​)
ಮುಖ ಟ್ಯಾನ್​ ಆಗುವುದನ್ನು ತಪ್ಪಿಸಲು ಯಾವ ಸನ್​ಸ್ಕ್ರೀನ್ ಬಳಸ್ತೀರಾ? ರಾಹುಲ್ ಗಾಂಧಿ ಕೊಟ್ಟ ಉತ್ತರವಿದು…

60 ವರ್ಷದ ಉದ್ಯಮಿ ಜತೆ ವಿವಾಹೇತರ ಸಂಬಂಧ! ನಟಿ ಕಸ್ತೂರಿ ಕೊಟ್ಟ ಪ್ರತಿಕ್ರಿಯೆ ಹೀಗಿದೆ…

ಮಹಿಳೆಯರ ಶವದ ಮಾಂಸವನ್ನು ಬೇಯಿಸಿ ತಿಂದಿದ್ದೀರಾ? ಆರೋಪಿ ಕೊಟ್ಟ ಪ್ರತಿಕ್ರಿಯೆ ನೋಡಿ ದಂಗಾದ ಅಧಿಕಾರಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 19 =
Remember me
