ಯಾದಗಿರಿ:ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ಗುರುವಾರ (ಆ.04) ತಡರಾತ್ರಿ ನಡೆದಿದೆ.
ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಅಪಘಾತದ ಸ್ಥಳದಲ್ಲೇ ಮೂರು ಜನ ಮೃತಪಟ್ಟರೆ, ಆಸ್ಪತ್ರೆಯಲ್ಲಿ ಮೂರು ಮಂದಿ ಪ್ರಾಣ ಬಿಟ್ಟಿದ್ದಾರೆ. 1 ವರ್ಷದ ಹೆಣ್ಣುಮಗು ಸೇರಿ 6 ಮಂದಿ ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಗಂಭೀರ ಗಾಯಗೊಂಡಿರುವ ಬಾಲಕನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದವರು. ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಘಟನೆ ಬೆನ್ನಲ್ಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌ ಹಾಗೂ ಪಿಐ ದೌವಲತ್ ಕುರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುಮಿಠಕಲ್ ಠಾಣಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಲೋಕದ ಡೊಂಕಿನತ್ತ ಗಮನ: ಸಮುದಾಯ, ಸಮಷ್ಟಿ ಸಮಸ್ಯೆಗಳ ಕಡೆಗೆ ಲೋಕಾಯುಕ್ತ ಚಿತ್ತ

ಲಾಲ್ ಸಿಂಗ್ ಛಡ್ಡಾ ಪ್ರಹಸನ, ಚಿತ್ರರಂಗದ ಜಾಗತೀಕರಣ

ಅನಾಥ ಮಕ್ಕಳಿಗೆ ಮೀಸಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + twelve =
Remember me
