ಬೆಂಗಳೂರು:ನೇಹಾ ಹಿರೇಮಠ ಕೊಲೆಗಾರನಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಘಟಕದ ಅಧ್ಯಕ್ಷೆ ರಾಧಾ ಕೊಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಕನ್ನಡ ನಾಡು ಶಾಂತಿ, ಸೌಹಾರ್ದತೆ, ಭಾವೈಕ್ಯತೆಯನ್ನು ಸಾರುವ ನಾಡು. ಇಂತಹ ನಾಡಲ್ಲಿ ನೇಹಾ ಎಂಬ ವಿದ್ಯಾರ್ಥಿಯನಿಯನ್ನು ಹಾಡುಹಗಲೇ, ನೂರಾರು ಜನಗಳ ಮಧ್ಯೆ, ಕಾಲೇಜು ಆವರಣದಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವುದು ಪೈಶಾಚಿಕ ಕೃತ್ಯ. ಕೊಲೆಗೈದಿರುವ ಫಯಾಜ್ ಎಂಬ ಯುವಕನನ್ನು ಗಲ್ಲಿಗೇರಿಸಬೇಕು. ಕಾರಣ ಸಮಾಜದಲ್ಲಿ ಜನರಲ್ಲಿ ಭಯ ಭಕ್ತಿ ಪ್ರೀತಿ ಜಾಗೃತಿ ಇಲ್ಲದಂತಾಗಿದೆ. ಮನುಷ್ಯತ್ವ ಮಾನವೀಯತೆ ಅನ್ನೋದೇ ಮರೆತು ಹೋಗಿದ್ದಾರೆ. ಅಮಾಯಕ ಯುವತಿಯರ ಪ್ರಾಣದ ಜೊತೆ ಆಟವಾಡುವವರ ವಿರುದ್ಧವಾಗಿ ಕಾನೂನು ರೀತಿಯಲ್ಲಿ ಉಗ್ರ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಂತಹ ಅಹಿತಕರ ಘಟನೆಗಳು ಮತ್ತೆ ನಡೆಯದ ಹಾಗೆ ಎಚ್ಚರಿಕೆ ವಹಿಸಬೇಕು. ಯುವಕರಿಗೆ ಶಾಲಾ ಕಾಲೇಜುಗಳಲ್ಲಿ ಮಹಿಳೆಯರನ್ನು ಗೌರವದಿಂದ ಕಾಣುವಂತೆ ನೀತಿ ಪಾಠ ಬೋಧಿಸಬೇಕು ಹಾಗೂ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದೇ ವೇಳೆ ನೇಹಾ ಹಿರೇಮಠರವರ ಆತ್ಮಕ್ಕೆ ಶಾಂತಿ ದೊರೆಯಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 13 =
Remember me
