ಚಾಮರಾಜನಗರ:ಗಡಿಜಿಲ್ಲೆಗೂ ರ‍್ಯಾಗಿಂಗ್‌ ಪಿಡುಗು ಕಾಲಿಟ್ಟಿದೆ. ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತುಮಕೂರು ಮೂಲದ ಕಿರಿಯ ವಿದ್ಯಾರ್ಥಿಯೊಬ್ಬನಿಗೆ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್‌ ಮಾಡಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ.
ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುವುದು, ತಾವು ಹೇಳಿದಂತೆ ಡ್ಯಾನ್ಸ್ ಮಾಡಿಸುವುದು, ಅಶ್ಲೀಲವಾಗಿ ಸೌಂಡ್ ಮಾಡುವುದು, ಕುರ್ಚಿಯಲ್ಲಿ ಕೂರುವಂತೆ ಕೂರಿಸುವುದು, ಕೆನ್ನೆಗೆ ಹೊಡೆಯುವುದು, ಹಲ್ಲೆ… ಮೊದಲಾದ ರೀತಿಯಲ್ಲಿ ರ‍್ಯಾಗಿಂಗ್‌ ಮಾಡಲಾಗಿದೆ ಎಂದು ನೊಂದ ವಿದ್ಯಾರ್ಥಿ ಪಾಲಕರ ಬಳಿ ಅಳಲು ತೋಡಿಕೊಂಡಿದ್ದಾನೆ.ಇದನ್ನೂ ಓದಿರಿಮೂರು ಪುಟ್ಟ ಕಂದಮ್ಮಗಳ ಕಣ್ಣೆದುರಲ್ಲೇ ತಾಯಿ ದುರಂತ ಸಾವು! ‘ನನ್ನನ್ನು ಎತ್ತಿಕೊಳ್ಳಮ್ಮಾ…’ ಎಂದು ಕಣ್ಣೀರಿಟ್ಟ ಮಕ್ಕಳು
ತುಮಕೂರಿನಿಂದ ಬಂದ ಪಾಲಕರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆ ಪೊಲೀಸರು ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌. ರ‍್ಯಾಗಿಂಗ್‌ ಮಾಡಿದ ವಿದ್ಯಾರ್ಥಿಗಳಿಂದ ಪೊಲೀಸರು ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಬಿಟ್ಟು ಕಳುಹಿಸಿದ್ದಾರೆ.
ಆದರೆ, ಈ ಕುರಿತು ಪ್ರತಿಕ್ರಿಸಿರುವ ಕಾಲೇಜಿನ ಡೀನ್ ಡಾ.ಸಂಜೀವ್, ವಿದ್ಯಾರ್ಥಿಗಳನ್ನು ಪೊಲೀಸರು ಯಾಕೆ ಕರೆದೊಯ್ದರು ಎಂಬುದು ಗೊತ್ತಿಲ್ಲ. ರ‍್ಯಾಗಿಂಗ್‌ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ, ಯಾವುದೇ ದೂರು ಬಂದಿಲ್ಲ ಎಂದಿದ್ದಾರೆ. ಇನ್ನೊಂದೆಡೆ ಕಿರಿಯ ವಿದ್ಯಾರ್ಥಿಯ ಪಾಲಕರು ಹಾಗೂ ರ‍್ಯಾಗಿಂಗ್‌ ಮಾಡಿದ ವಿದ್ಯಾರ್ಥಿಗಳನ್ನು ಮೆಡಿಕಲ್ ಕಾಲೇಜಿನ ಅಧಿಕಾರಿಗಳು ಕರೆಸಿ ಸಂಧಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಮೂರು ಪುಟ್ಟ ಕಂದಮ್ಮಗಳ ಕಣ್ಣೆದುರಲ್ಲೇ ತಾಯಿ ದುರಂತ ಸಾವು! ‘ನನ್ನನ್ನು ಎತ್ತಿಕೊಳ್ಳಮ್ಮಾ…’ ಎಂದು ಶವದ ಮುಂದೆ ಕಣ್ಣೀರಿಟ್ಟ ಮಕ್ಕಳು

ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + nine =
Remember me
