ಬೆಂಗಳೂರು:ಬೆಂಗಳೂರಿನಲ್ಲಿ 2017ರಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಯಿತು. ಅಂದಿನಿಂದಲೂ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ, ಚಪಾತಿ ನೀಡುವುದಕ್ಕೆ ಬೇಡಿಕೆ ಕೇಳಿ ಬರುತ್ತಿತ್ತು. ಆದ್ದರಿಂದ ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮುದ್ದೆ ಊಟದ ವ್ಯವಸ್ಥೆಗೆ ಬಿಬಿಎಂಪಿ ಸಿದ್ಧತೆ ನಡೆಸಿದೆ. ಅಂದಹಾಗೆ ಕರುನಾಡಿನ ಸುಗ್ಗಿಯ ಹಬ್ಬ ಸಂಕ್ರಾಂತಿ ವೇಳೆಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಮುದ್ದೆ ದೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ತನಕ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೇವಲ ರೈಸ್‌ ಬಾತ್‌ ಅಥವಾ ಅನ್ನ, ಸಾಂಬರ್‌, ಮೊಸರನ್ನ ಮಾತ್ರ ಕೊಡಲಾಗುತ್ತಿತ್ತು. ಆದರೆ ಹಿರಿಯ ನಾಗರಿಕರು ಸೇರಿದಂತೆ ಇತರರು ಕೇವಲ ರೈಸ್‌ ಬೇಡ, ಮುದ್ದೆ, ಚಪಾತಿಯನ್ನೂ ನೀಡುವಂತೆ ಕೇಳುತ್ತಿದ್ದರು. ಈ ವಿಚಾರ ಸರ್ಕಾರದ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‌ ನಲ್ಲಿ ಮುದ್ದೆ ಕೊಡಲು ತೀರ್ಮಾನಿಸಲಾಗಿದೆ.
ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮಾತ್ರ ಮುದ್ದೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ. ಮುದ್ದೆ ಕೊಡುವುದರಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯೂ ಇದೆ.
ಪಾರದರ್ಶಕ ವ್ಯವಸ್ಥೆಇಂದಿರಾ ಕ್ಯಾಂಟೀನ್​​​​ನಲ್ಲಿ ಸುಳ್ಳು ಲೆಕ್ಕ ನೀಡಿ ರಿಯಾಯಿತಿ ಹಣ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಆದ್ದರಿಂದ ಬಿಬಿಎಂಪಿ ಅಧಿಕಾರಿಗಳು ಪ್ರತಿಯೊಂದನ್ನು ಡಿಜಿಟಲಿಕರಣದ ಮೂಲಕ ಪಾರದರ್ಶಕ ವ್ಯವಸ್ಥೆ ಮಾಡಲು ನಿರ್ಧರಿಸಿದ್ದಾರೆ. 19 ಮೊಬೈಲ್‌ ಇಂದಿರಾ ಕ್ಯಾಂಟೀನ್‌ ವಾಹನ ಕೆಟ್ಟು ನಿಂತುಕೊಂಡಿದ್ದವು. ಇದೀಗ ಆ ಕ್ಯಾಂಟೀನ್‌ಗಳನ್ನು ದುರಸ್ತಿಪಡಿಸಲಾಗಿದೆ. ಇವು ಇನ್ನೊಂದು ವಾರದಲ್ಲಿ ಪುನರ್‌ ಆರಂಭಗೊಳ್ಳಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜೂನಿಯರ್ ಮೆಹಮೂದ್ ನಿಧನ: ನಯೀಮ್ ಸೈಯದ್‌ನನ್ನು ‘ಜೂನಿಯರ್ ಮೆಹಮೂದ್’ ಮಾಡಿದ್ದೇ ಈ ಸೂಪರ್‌ಸ್ಟಾರ್


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
