ಬೆಂಗಳೂರು:ಡ್ರಗ್ಸ್​ ಮಾಫಿಯಾ ಪ್ರಕರಣದಲ್ಲಿ ಬಂಧಿತನಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಆಪ್ತ ರವಿಶಂಕರ್​ನ ಐಷಾರಾಮಿ ಜೀವನ ಕಂಡು ಸಿಸಿಬಿ ಪೊಲೀಸರೇ ದಂಗಾಗಿದ್ದಾರೆ.
ಆರ್​ಟಿಒ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಯಲ್ಲಿದ್ದ ರವಿಶಂಕರ್​, ಲ್ಯಾವೆಲ್ಲೆ ರಸ್ತೆಯ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ. ಫ್ಯಾನ್ಸಿ ನಂಬರ್​ ಕೊಡುವ ವೇಳೆ ಹಲವು ಪ್ರಭಾವಿ ಉದ್ಯಮಿಗಳ ಪರಿಚಯವಾಗಿದ್ದು, ಅವರೊಂದಿಗೆ ಆತ್ಮೀಯತೆ ಬೆಳೆಸಿಕೊಂಡಿದ್ದ. ಕಳೆದ ನಾಲ್ಕು ವರ್ಷಗಳ ಹಿಂದೆ ಉದ್ಯಮಿಯೊಬ್ಬರು ಆಯೋಜಿಸಿದ್ದ ಪಾರ್ಟಿಯೊಂದರಲ್ಲಿ ಪಾಲ್ಗೊಂಡಿದ್ದ ರವಿಶಂಕರ್​ಗೆ ನಟಿ ರಾಗಿಣಿ ದ್ವಿವೇದಿ ಪರಿಚಯವಾಗಿದ್ದರು. ಕ್ರಮೇಣ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು.
ಇದನ್ನೂ ಓದಿರಿ‘ತುಪ್ಪ’ದ ಬೆಡಗಿ ರಾಗಿಣಿಗೆ ಸೊಳ್ಳೆ ಕಾಟವಂತೆ! ಹೀಗಿತ್ತು ಬಂಧನದ ಮೊದಲ ರಾತ್ರಿ
ರಾಗಿಣಿ ಅಭಿನಯಿಸಿದ್ದ ಸಿನಿಮಾಕ್ಕೆ ಸಂಬಂಧಿಸಿದ ಪ್ರತಿಯೊಂದು ಕಾರ್ಯಕ್ರಮ ಹಾಗೂ ಪಾರ್ಟಿಯಲ್ಲಿ ರವಿಶಂಕರ್​ ಪಾಲ್ಗೊಳ್ಳುತ್ತಿದ್ದ. ಹೋಟೆಲ್​, ಪಬ್​, ಪಾರ್ಟಿಗೆ ಸುತ್ತಾಡುವ ಮಟ್ಟಕ್ಕೆ ಇಬ್ಬರ ನಡುವೆ ಆತ್ಮೀಯತೆ ಇತ್ತು. ಅಲ್ಲದೆ, ಬೆಂಗಳೂರು ಮಾತ್ರವಲ್ಲದೆ ಗೋವಾ ಸೇರಿದಂತೆ ಹೊರ ರಾಜ್ಯಗಳಿಗೂ ತೆರಳಿ ಪಾರ್ಟಿ ಮಾಡಿದ್ದರು ಎನ್ನಲಾಗಿದೆ.
ಡ್ರಗ್ಸ್​ ಪೂರೈಕೆ ಪ್ರಕರಣದ ಕಿಂಗ್​ಪಿನ್​ ಎನ್ನಲಾದ ಬಂಧಿತ ವೀರೇನ್​ ಖನ್ನಾ ಆಯೋಜಿಸುತ್ತಿದ್ದ “ಡ್ರೈವ್​ ಇನ್​ ಥಿಯೇಟರ್​’ ಎಂಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು. ಇದಕ್ಕೆ ತಗುಲುವ ವೆಚ್ಚವನ್ನು ಆರೋಪಿಯೇ ಭರಿಸುತ್ತಿದ್ದ. ರವಿಶಂಕರ್​ನ ಐಷಾರಾಮಿ ಜೀವನದ ಬೆನ್ನು ಬಿದ್ದಿರುವ ಸಿಸಿಬಿ ಪೊಲೀಸರು, ಆಸ್ತಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬ್ಯಾಂಕ್​ ವಿವರವನ್ನು ಪರಿಶೀಲಿಸುತ್ತಿದ್ದಾರೆ.
ನನಗೆ ರಾಗಿಣಿ ಯಾರೆಂದು ಗೊತ್ತಿಲ್ಲ; ಡಿಸಿಎಂ ಕಾರಜೋಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 6 =
Remember me
