ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಪದಚ್ಯುತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಮಂಗಳವಾರ ಈ ಆದೇಶ ಹೊರಡಿಸಿದ್ದು, ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿರುವ ರಹೀಂ ಉಚ್ಚಿಲ್‌ ಪದಚ್ಯುತಿಗೆ ಕಾರಣ ತಿಳಿದು ಬಂದಿಲ್ಲ. ಆದೇಶ ಬಂದ ಬಳಿಕವೇ ನನಗೂ ವಿಷಯ ತಿಳಿಯಿತು. ಎರಡು ಬಾರಿ ಅಕಾಡೆಮಿ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ ಎಂದು ತಿಳಿಸಿದ್ದಾರೆ. ಮುಂದಿನ ಅಧ್ಯಕ್ಷರ ಆಯ್ಕೆ ವರೆಗೆ ಅಕಾಡೆಮಿ ರಿಜಿಸ್ಟ್ರಾರ್‌, ಕಾರ್ಯಭಾರ ವಹಿಸಿಕೊಳ್ಳಲಿದ್ದಾರೆ.
Sign in to your account
Please enter an answer in digits:one × 4 =
Remember me
