ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದೆ ಹಾಗೆಂದು ಅಧಿಕಾರ ನಮ್ಮ ಬಳಿ ಇದೆ, ಲೋಕಸಭೆ ಕೂಡ ಸುಲಭ ಎಂದು ಭಾವಿಸಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯ ನಾಯಕರನ್ನು ಎಚ್ಚರಿಸಿದ್ದಾರೆ.ಲೋಕಸಭೆ ಚುನಾವಣೆ ಪೂರ್ವ ತಯಾರಿಗಾಗಿ ದೆಹಲಿಯಲ್ಲಿ ಆಯೋಜನೆಗೊಂಡಿದ ಪಕ್ಷದ ಪ್ರಮುಖ ನಾಯಕರ ಸಭೆಯಲ್ಲಿ ಅನೇಕ ಎಚ್ಚರಿಕೆ ಸಂದೇಶವನ್ನು ರಾಹುಲ್ ಗಾಂಧಿ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ರಾಜ್ಯ ಬಿಜೆಪಿ ಸರ್ಕಾರ ವೈಫಲ್ಯದಿಂದ ಜನ ಅವರಿಗೆ ಮತ ನೀಡಿಲ್ಲ. ಆದರೆ, ಲೋಕಸಭೆ ಚುನಾವಣೆ ಚಿತ್ರಣ ಬೇರೆಯದೇ ಇರುತ್ತದೆ. ಮೋದಿ ್ಯಾಕ್ಟರ್ ಇಲ್ಲಿ ಪ್ರಮುಖವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರದ ವೈಫಲ್ಯ ದ ಬಗ್ಗೆಯೂ ಸಹ ಗಮವಿರಲಿ, ಅದನ್ನೇ ಪ್ರಚಾರ ಮಾಡಿ ಎಂದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.ಲೋಕಸಭಾ ಚುನಾವಣೆಗೆಂದೇ ರಣತಂತ್ರ ರೂಪಿಸಬೇಕು. ವಿಧಾನಸಭೆ ಚುನಾವಣೆಯಲ್ಲಿ ಗೆದ್ದಂತೆ ಲೋಕಸಭೆಯನ್ನು ಸಹ ಗೆಲ್ಲಿಸಿಕೊಂಡು ಬರಬೇಕು. ಗ್ಯಾರಂಟಿ ಯೋಜನೆಗಳು ಎಷ್ಟರ ಮಟ್ಟಿಗೆ ಜನರನ್ನು ತಲುಪಿವೆ ಎಂಬುದನ್ನು ಪರಿಶೀಲಿಸಿ, ಇದರ ಫಲಾನುಭವಿಗಳ ಜಿಲ್ಲಾವಾರು ಸಭೆ ಮಾಡಿ,ಸಾಮಾಜಿಕ ಜಾಲತಾಣಗಳನ್ನು ಮತ್ತಷ್ಟು ಸದೃಢಗೊಳಿಸಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen + 18 =
Remember me
