ಬೆಂಗಳೂರು:ಟೀಮ್​ ಇಂಡಿಯಾದ ಮಾಜಿ ಆಟಗಾರರಾದ ಜಾವಗಲ್​ ಶ್ರೀನಾಥ್​ ಮತ್ತು ರಾಹುಲ್​ ಡ್ರಾವಿಡ್​ ಅವರು ತಮ್ಮ ಹಕ್ಕನ್ನು ಚಲಾಯಿಸಿದರು.
ಜಾವಗಲ್ ಶ್ರೀನಾಥ್ ಅವರು ತಮ್ಮ ಕುಟುಂಬ ಸಮೇತ ಮೈಸೂರಲ್ಲಿ ಮತದಾನ ಮಾಡಿದರು. ಪ್ರಸ್ತುತ ಟೀಮ್​ ಇಂಡಿಯಾದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರು ಮಲ್ಲೇಶ್ವರಂ ಕ್ಷೇತ್ರದ ಡಾಲರ್ಸ್ ಕಾಲೋನಿ ಮತಗಟ್ಟೆ 53ರಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು.

ನಟ ಉಪೇಂದ್ರ, ರಕ್ಷಿತ್​ ಶೆಟ್ಟಿ, ರಿಷಭ್​ ಶೆಟ್ಟಿ, ರಮೇಶ್​ ಅರವಿಂದ್​, ಶ್ರೀ ಮುರುಳಿ, ಅಮೂಲ್ಯ, ಮಾಲಾಶ್ರೀ, ಹರ್ಷಿಕಾ ಪೂಣಚ್ಚ, ನಟ ನೆನಪಿರಲಿ ಪ್ರೇಮ್​, ಡಾಲಿ ಧನಂಜಯ್​, ವಿಕ್ಕಿ ವರುಣ್​, ಕೃಷಿ ತಾಪಂಡ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈಗಾಗಲೇ ತಮ್ಮ ಮತವನ್ನು ಚಲಾಯಿಸಿದ್ದಾರೆ.
ರಾಜ್ಯದಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಶೇ. 20.94% ರಷ್ಟು ಮತದಾನ ನಡೆದಿದೆ. ಕೇವಲ 4 ಗಂಟೆಗಲ ಅವಧಿಯಲ್ಲಿ ಈ ಪ್ರಮಾಣವನ್ನು ತಲುಪಿದ್ದು, ಮತದಾನ ಪ್ರಮಾಣದಲ್ಲಿ ಭಾರೀ ಏರಿಕೆ ಸೂಚನೆ ಸಿಕ್ಕಿದೆ.
ಕರ್ನಾಟಕ ವಿಧಾನಸಭೆಯು ಒಟ್ಟು 224 ಸದಸ್ಯ ಬಲವನ್ನು ಹೊಂದಿದ್ದು, ಸರ್ಕಾರ ರಚನೆ ಮಾಡಲು ಯಾವುದೇ ಪಕ್ಷಕ್ಕೆ 113 ಸದಸ್ಯರ ಬಲವುಳ್ಳ ಸ್ಪಷ್ಟ ಬಹುಮತ ಬೇಕಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದ್ದು, ಯಾರು ಕರ್ನಾಟಕದ ಮುಂದಿನ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.(ದಿಗ್ವಿಜಯ ನ್ಯೂಸ್​)
ಕುಟುಂಬ ಸಮೇತ ಕೇತಗಾನಹಳ್ಳಿ ಗ್ರಾಮದಲ್ಲಿ ಮತದಾನ ಮಾಡಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
