ಬಾಗಲಕೋಟೆ:ಬಸವ ಸಮಿತಿ ವತಿಯಿಂದ ಕೂಡಲಸಂಗಮದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಾಸೋಹ ಭವನದಲ್ಲಿ ಪ್ರಸಾದ ಭೋಜನ ಸೇವಿಸಿದ್ದಾರೆ. ಬಳಿಕ ಕೂಡಲಸಂಗಮದ ನಿತ್ಯ ಉಚಿತ ದಾಸೋಹ ಭವನಕ್ಕೆ ರಾಹುಲ್ ಗಾಂಧಿ 5000 ರೂಪಾಯಿ ದೇಣಿಗೆ ನೀಡಿದ್ದಾರೆ.
ಇದನ್ನೂ ಓದಿ:ನೀವು ಬಾದಾಮಿಯಲ್ಲಿ ಹುಟ್ಟಿ ಗೋಲಿ ಆಡಿದ್ದೀರಾ? ಸಿದ್ದರಾಮಯ್ಯ ಟ್ವೀಟ್​ಗೆ ಪ್ರತಾಪ್ ಸಿಂಹ ಟಾಂಗ್
ರಾಹುಲ್ ಗಾಂಧಿ ಅನ್ನ ದಾಸೋಹ ಭವನದಲ್ಲಿ ಉತ್ತರ ಕರ್ನಾಟಕದ ಖಡಕ್ ರೊಟ್ಟಿ ರುಚಿ ನೋಡಿದ್ದಾರೆ. ಚಪಾತಿ, ಅನ್ನ-ಸಾರು, ಹೋಳಿಗೆ, ಹಪ್ಪಳ, ಬದನೆಕಾಯಿ ಪಲ್ಯ‌ ಸೇರಿಸಿ ಊಟ ಮಾಡಿದ್ದಾರೆ. ರಾಹುಲ್​ಗೆ ಮಾಜಿ ಸಿಎಂ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಕೆ.ಸಿ.ವೇಣುಗೋಪಾಲ್ ಸಾಥ್ ನೀಡಿದರು.
ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಾ, ಬಸವಣ್ಣನವರ ಜಯಂತಿ ದಿನದಂದು ಕೂಡಲಸಂಗಮಕ್ಕೆ ಆಗಮಿಸಿರುವುದು ಬಹಳ ಖುಷಿಯಾಗಿದೆ. ಇಂದು ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಕಾರ್ಯರೂಪಕ್ಕೆ ಬರಲು ಬಸವಣ್ಣನವರ ಅನುಭವ ಮಂಟಪ ಕಾರಣ.
ಇದನ್ನೂ ಓದಿ:ವರುಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ್ದ ವಿ. ಸೋಮಣ್ಣ, ಪ್ರತಾಪ್ ಸಿಂಹಗೆ ಗ್ರಾಮಸ್ಥರಿಂದ ತರಾಟೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 3 =
Remember me
