ಬೆಂಗಳೂರು:ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್​ 10ರಂದು ಕೋಲಾರದಲ್ಲಿ ನಡೆಯಬೇಕಿದ್ದ ಜೈ ಭಾರತ್​ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್​ ಏಪ್ರಿಲ್​ 10ರಂದು ಕೋಲಾರದಲ್ಲಿ ರಾಹುಲ್​ ಗಾಂಧಿ ಅವರು ಜೈ ಭಾರತ್​​ ಸಮಾವೇಶವನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ, ಅನಿವಾರ್ಯ ಕಾರಣಗಳಿಂದಾಗಿ ಕಾರ್ಯಕ್ರಮವನ್ನು ಏಪ್ರಿಲ್​ 16ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಮೊದಲು ಏಪ್ರಿಲ್​ 5ರಂದು ಕೋಲಾರದಲ್ಲಿ ಸಮಾವೇಶ ನಡೆಸಲಾಗುವುದು ಎಂದು ಕಾಂಗ್ರೆಸ್​ ನಾಯಕರು ಹೇಳಿದ್ದರು. ಆ ನಂತರ ಏಪ್ರಿಲ್​ 10 ಎಂದು ಹೇಳಲಾಗಿತ್ತು.
ಒಟ್ಟಾರೆಯಾಗಿ ಎರಡು ಬಾರಿ ದಿನಾಂಕ ಬದಲಿಸುವ ಕಾಂಗ್ರೆಸ್​​ ನಾಯಕರು ಇದೀಗ ಏಪ್ರಿಲ್​ 16ರಂದು ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಳಲಿದ್ದಾರೆ ಎಂದು ಹೇಳಿದ್ಧಾರೆ.
ಇದನ್ನೂ ಓದಿ:ತೆಲಂಗಾಣದ ಅಭಿವೃದ್ಧಿಗೆ ತೊಡಕಾಗಬೇಡಿ; ಕೆಸಿಆರ್​ ಕುಟುಕಿದ ಪ್ರಧಾನಿ ಮೋದಿ
ಸಂಸತ್​ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್​ ಗಾಂಧಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿರುವ ಮೊದಲ ಸಭೆ ಇದು. ಮೋದಿ ಉಪನಾಮ ಕುರಿತು ವ್ಯಂಗ್ಯವಾಡಿ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಕಾರಣ ಅವರನ್ನು ಸಂಸತ್​ ಸ್ಥಾನದಿಂದ ಅನರ್ಹ ಮಾಡಿರುವುದು ಸಂವಿಧಾನ-ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಎಂದು ಡಿ.ಕೆ.ಶಿವಕುಮಾರ್​ ಕಿಡಿಕಾರಿದ್ದಾರೆ.
ಏಳು ಲಕ್ಷ ಮತಗಳ ಅಂತರದಿಂದ ಜಯ ಗಳಿಸಿರುವ ರಾಹುಲ್​ ಗಾಂಧಿ ಅವರನ್ನು ಸಂಸತ್​ ಸ್ಥಾನದಿಂದ ಅನರ್ಹ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + thirteen =
Remember me
