
ಬೆಂಗಳೂರು:ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆ ಜಾಗವನ್ನು ಕ್ರಮ ಬದ್ದವಾಗಿ ಮಂಜೂರು ಮಾಡಲಾಗಿದೆ. ಯಾವುದೇ ನಿಯಮಾವಳಿ ಉಲ್ಲಂಘನೆ ಆಗಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಳ್ಳು ಮಾಹಿತಿ ನೀಡಿ ಆರೋಪ ಮಾಡುತ್ತಿರುವ ಛಲವಾದಿ ನಾರಾಯಣಸ್ವಾಮಿ, 2006ರಲ್ಲಿ ಮೈಸೂರಿನ ಹೆಬ್ಬಾಳದಲ್ಲಿ 2 ಎಕರೆ ಜಾಗ ಪಡೆದಿದ್ದು, 18 ವರ್ಷಗಳಾದರೂ ಅಲ್ಲಿ ಏನೂ ಮಾಡದೆ ಕಾಟಾಚಾರಕ್ಕೊಂದು ಶೆಡ್ ಹಾಕಿಕೊಂಡು ಕೂತಿದ್ದಾರೆ ನೋಡಿ ಎಂದು ದಾಖಲೆ ಬಿಡುಗಡೆ ಮಾಡಿ ಲೇವಡಿ ಮಾಡಿದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆಗೆ ಸಿ.ಎ. ನಿವೇಶನ ಕೊಟ್ಟಿದ್ದಕ್ಕೆ ಎಗರಾಡುತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ. ಇವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ನಮಗಿಲ್ಲ ಎಂದರು.ರಾಹುಲ್ ಖರ್ಗೆ ಎರಡು ಬಾರಿ ಯುಪಿಎಸ್ಸಿ ಪರೀಕ್ಷೆ ಪಾಸು ಮಾಡಿದ್ದಾರೆ. ಎಂಜಿನಿಯರಿಂಗ್ ಪದವೀಧರರು. ಡಿಆರ್‌ಡಿಓ ಪ್ರಶಸ್ತಿ ಪುರಸ್ಕೃತರಾಗಿದ್ದು, ಈ ಅರ್ಹತೆ ಮೇಲೆಯೇ ನಿವೇಶನ ಮಂಜೂರು ಮಾಡಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಯಾವುದೇ ಅಕ್ರಮ ಎಸಗಿಲ್ಲ ಎಂದರು.ನಾರಾಯಣಸ್ವಾಮಿಗೆ ಮಂಜೂರಾಗಿರುವ ಕೈಗಾರಿಕಾ ನಿವೇಶನದ ಸಮರ್ಪಕ ಬಳಕೆಗೆ ಮತ್ತೊಮ್ಮೆ 6 ತಿಂಗಳ ಕಾಲಾವಕಾಶ ಪಡೆದುಕೊಂಡಿದ್ದಾರೆ. ಇಲ್ಲೂ ಅವರು ವಿಫಲರಾದರೆ, ನಿಯಮಗಳ ಪ್ರಕಾರ ಆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು ಎಂದು ಹೇಳಿದರು.ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ವಿನಾ ಕಾರಣ ಆರೋಪ ಮಾಡುವುದು ಸರಿಯಲ್ಲ. ಬಿಜೆಪಿ ಈ ರೀತಿಯ ಕುತಂತ್ರ ಮಾಡಬಾರದು. ನಮಗೆ ಪಾಠ ಮಾಡುವ ಅವರು, ತಮಗೆ ನೀಡಿರುವ ಕೈಗಾರಿಕಾ ನಿವೇಶನದಲ್ಲಿ ನಾರಾಯಣಸ್ವಾಮಿ ಇಷ್ಟು ಹೊತ್ತಿಗೆ ಶೇ.51ರಷ್ಟು ಭೂಮಿಯ ಬಳಕೆ ಮಾಡಿಕೊಳ್ಳಬೇಕಾಗಿತ್ತು. ಆದರೆ ಶೇ.5ರಷ್ಟು ಭೂಮಿಯಲ್ಲಿ ಕಾಟಾಚಾರಕ್ಕೆ ಶೆಡ್ ಹಾಕಿ, ಬಾಡಿಗೆಗೆ ಇದೆ ಎಂದು ಬೋರ್ಡ್ ಹಾಕಿದ್ದಾರೆ ಎಂದು ಟೀಕಿಸಿದರು.
ನಾರಾಯಣಸ್ವಾಮಿ 2006ರಲ್ಲಿ ‘ಬೃಂದಾವನ್ ಸಾಫ್ಟ್ವೇರ್ ಎನ್ನುವ ಕಂಪನಿ ಶುರು ಮಾಡುವುದಾಗಿ ಭೂಮಿ ಪಡೆದುಕೊಂಡರು. ಆ ಮೇಲೆ ಅಲ್ಲಿ ಅದೇ ಹೆಸರಿನ ಗಾರ್ಮೆಂಟ್ಸ್ ಕಾರ್ಖಾನೆ ಆರಂಭಿಸುತ್ತೇನೆ ಎಂದರು. ಬಳಿಕ ಗೋದಾಮು ಮಾಡುತ್ತೇನೆಂದರು. ಅವರು ಕಾಲಕಾಲಕ್ಕೆ ಬೇರೆಬೇರೆ ಉದ್ದೇಶಕ್ಕೆ ಬದಲಿಸಿಕೊಂಡರೇ ವಿನಾ ಏನನ್ನೂ ಮಾಡಲಿಲ್ಲ. ಇದಾದ ಮೇಲೆ ಸರ್ಕಾರ ತನ್ನ ನಿಯಮದಂತೆ 2016ರ ನ.11ರಂದು ಜಮೀನನ್ನು ವಾಪಸ್ ಪಡೆಯಲು ಆದೇಶಿಸಿದಾಗ, ಇದರ ವಿರುದ್ಧ ಹೈಕೋರ್ಟಿಗೆ ಹೋಗಿ ತಡೆಯಾಜ್ಞೆ ತಂದ ಈ ವ್ಯಕ್ತಿ ಈಗ ಪುಕ್ಕಟೆ ಪ್ರಚಾರಕ್ಕೆ ಇಳಿದಿದ್ದಾರೆ ಎಂದರು.ನಾರಾಯಣಸ್ವಾಮಿ ರಾಜಕೀಯದಲ್ಲಿ ಮೇಲೆ ಬರಲು ಖರ್ಗೆ ಕಾರಣ. ಅವರು ರೈಲ್ವೆ ಸಚಿವರಾಗಿದ್ದಾಗ ಇವರನ್ನು ರೈಲ್ವೆ ಬಳಕೆದಾರರ ಸಮಿತಿಯ ಅಧ್ಯಕ್ಷರನ್ನಾಗಿಸಿದ್ದರು. ಆದರೂ ನಾರಾಯಣಸ್ವಾಮಿ ಉಂಡ ಮನೆಗೆ ಎರಡು ಬಗೆಯುತ್ತಿದ್ದಾರೆ. ಹೀಗೆ ಮಾತನಾಡಿದರೆ ಬಿಜೆಪಿಯಲ್ಲಿ ಇನ್ನೂ ಮೇಲೇರಬಹುದು ಎನ್ನುವ ಭ್ರಮೆಯಲ್ಲಿ ಅವರಿರಬಹುದು ಎಂದು ಪಾಟೀಲ ಕುಟುಕಿದರು.
72 ಅರ್ಜಿಯಲ್ಲ, 6 ಅರ್ಜಿ!ಇವರು ಹೇಳುವ ಹಾಗೆ ಈ ನಿವೇಶಕ್ಕೆ 72 ಅರ್ಜಿ ಬಂದಿರಲಿಲ್ಲ. ಬಂದಿದ್ದು ಕೇವಲ 6 ಅರ್ಜಿ. ಅದರಲ್ಲಿ ಮೂರು ವಸತಿ ಉದ್ದೇಶದ್ದು. ಅಲ್ಲಿ ಈಗಾಗಲೇ ಅಂತಹ ಉದ್ದೇಶಕ್ಕೆ ಕೊಟ್ಟಿದ್ದರಿಂದ ಅವುಗಳನ್ನು ತಿರಸ್ಕರಿಸಲಾಗಿದೆ. ಉಳಿದಂತೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಅರ್ಜಿ ಬಂದಿದ್ದರೂ ಸಮಪರ್ಕ ದಾಖಲೆ ಸಲ್ಲಿಸಿರಲಿಲ್ಲ. ಇನ್ನು ಉಳಿದಿದ್ದು ರಾಹುಲ್ ಮಾತ್ರ. ಇವರು ಎಲ್ಲ ರೀತಿಯಲ್ಲೂ ಸಮರ್ಥರಿದ್ದರು ಎಂದರು.
ರಾಷ್ಟ್ರೋತ್ಥಾನ ಪರಿಷತ್‌ಗೆ 5 ಎಕರೆಆರೆಸ್ಸೆಸ್ ಅಂಗವಾಗಿರುವ ರಾಷ್ಟ್ರೋತ್ಥಾನ ಪರಿಷತ್ತಿಗೆ ಹೈಟೆಕ್ ಡಿಫೆನ್ಸ್ ಪಾರ್ಕಿನಲ್ಲಿ ವಿವಿಧೋದ್ದೇಶ ವಾಣಿಜ್ಯ ಸಂಕೀರ್ಣಕ್ಕೆಂದು 2013ರಲ್ಲಿ 5 ಎಕರೆ ಕೊಡಲಾಗಿದೆ. ಇದುವರೆಗೂ ಅವರು ಅಲ್ಲಿ ಏನೂ ಮಾಡಿಲ್ಲ. ಕೋವಿಡ್ ನೆವ ಹೇಳಿಕೊಂಡು ಮತ್ತೆ ಮತ್ತೆ ಕಾಲಾವಕಾಶ ಕೇಳಿಕೊಂಡು ಬಂದಿದ್ದಾರೆ. ಇತ್ತೀಚೆಗೆ 26.12.2023ರಂದು ಪತ್ರ ಬರೆದು 2 ವರ್ಷಗಳ ಸಮಯ ತೆಗೆದುಕೊಂಡಿದ್ದಾರೆ. ಈ ಜಮೀನನ್ನು ವಾಪಸ್ ಪಡೆಯಬೇಕೋ ಬೇಡವೋ ಎನ್ನುವುದನ್ನು ಆರೋಪ ಮಾಡುತ್ತಿರುವ ಲೆಹರ್‌ಸಿಂಗ್ ಮತ್ತು ನಾರಾಯಣಸ್ವಾಮಿ ಹೇಳಬೇಕು ಎಂದು ಆಗ್ರಹಿಸಿದರು.
ನಿರಾಣಿಗೆ 25 ಎಕರೆ ಮಂಜೂರುಮುರುಗೇಶ ನಿರಾಣಿ ಹಿಂದೆ ಕೈಗಾರಿಕಾ ಸಚಿವರಾಗಿದ್ದಾಗ ಬಾಗಲಕೋಟೆಯ ನವನಗರ ಕೈಗಾರಿಕಾ ಪ್ರದೇಶದಲ್ಲಿ 12.3.2012 ರಂದು ತಮ್ಮದೇ ಸಂಸ್ಥೆಗೆ 25 ಎಕರೆ ಕೊಟ್ಟುಕೊಂಡು, ಅಲ್ಲಿ ತೇಜಸ್ ಇಂಟರ್ನ್ಯಾಷನಲ್ ಸ್ಕೂಲ್ ಕಟ್ಟಿದ್ದಾರೆ. ಅದು ಆಗ್ರೋ ಟೆಕ್ ಪಾರ್ಕ್‌ಗೆ ಮೀಸಲಾಗಿದ್ದ ಜಾಗ. ಆಮೇಲೆ ಪುನಃ ಕೈಗಾರಿಕಾ ಸಚಿವರಾದಾಗ ಕೂಡ 19.12.2022ರ ರಂದು ಅಲ್ಲೇ ಮತ್ತೆ 6.17 ಎಕರೆ ತೆಗೆದುಕೊಂಡು, ತಮಗೆ ತಾವೇ ಅಭಿನಂದನಾ ಪತ್ರ ಬರೆದುಕೊಂಡಿದ್ದಾರೆ. ಇದು ಯಾಕೆ ಅವರ ಕಣ್ಣಿಗೆ ಕಾಣಿಸುತ್ತಿಲ್ಲ ಎಂದು ಕೇಳಿದರು.ಇದಲ್ಲದೆ, ಕೆ.ಆರ್.ಪೇಟೆ ಬನ್ನೇನಹಳ್ಳಿಯಲ್ಲಿ 200 ಎಕರೆ ಭೂಮಿ ಮಂಜೂರು ಂಆಡಿಸಿಕೊಂಡಿದ್ದ ನಿರಾಣಿ ಅವರು ಬಳಿಕ ಅದನ್ನು ವಾಪಸ್ಸು ನೀಡಿದ್ದಾರೆ ಎಂದರು.
ಚಾಣುಕ್ಯ ವಿವಿಗೆ 116 ಎಕರೆಚಾಣಕ್ಯ ವಿ.ವಿ.ಗೂ 116 ಎಕರೆ ಮಂಜೂರು ಮಾಡಿ ಕೇವಲ 50 ಕೋಟಿ ರೂಗೆ ಈ ಜಮೀನು ನೀಡಲಾಗಿದೆ. ಇದರಿಂದ ಕೆಐಎಡಿಬಿಗೆ 137 ಕೋಟಿ ರೂಪಾಯಿ ನಷ್ಟ ಆಗಿದೆ. 2025ರ ಜೂನ್ ಒಳಗೆ 116 ಎಕರೆಯಲ್ಲಿ ಕನಿಷ್ಠ ಶೇ.51ರಷ್ಟು ಜಾಗವನ್ನು ಬಳಕೆ ಮಾಡದಿದ್ದರೆ ಉಳಿದ ಜಾಗವನ್ನು ಮುಲಾಜಿಲ್ಲದೆ ವಾಪಸ್ ತೆಗೆದುಕೊಳ್ಳಲಾಗುವುದು. ಇಂಥಹ ಪ್ರಕರಣಗಳು ನಾರಾಯಣಸ್ವಾಮಿ ಯಾಕೆ ಕಾಣಿಸುವುದಿಲ್ಲ? ರಾಜ್ಯಪಾಲರಿಗೆ ಇನ್ನೂ ಯಾಕೆ ದೂರು ನೀಡಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಪ್ರಶ್ನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
