ರಾಯಚೂರು:ಕಾರು ಮತ್ತು ಲಾರಿ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ದುರಾದೃಷ್ಟಕರವೆಂದರೆ ಅಂತ್ಯಸಂಸ್ಕಾರಕ್ಕೆ ಹೋಗಿ ಬರುತ್ತಿದ್ದಾಗ ದುರಂತ ಅಂತ್ಯ ಕಂಡಿದ್ದಾರೆ. ಮೃತರು ಲಿಂಗಸೂಗೂರು ತಾಲೂಕಿನ ದೇವರಬೂಪೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದ್ದು, ಇನ್ನಷ್ಟು ಮಾಹಿತಿ ಬರಬೇಕಿದೆ.
ಇದನ್ನೂ ಓದಿ:ದಿನಕ್ಕೆ 3.3 ಲೀಟರ್​ ಮೂತ್ರ ಸೇವನೆ; ಕಣ್ಣು, ಮೂಗಿನಿಂದಲೂ ಒಳಗೆಳೆದುಕೊಳ್ತಾನೆ; ಮೈಗೆಲ್ಲ ಉಜ್ಜಿಕೊಳ್ತಾನೆ…!
ಗುರುವಾರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಶಿವರಾಜ್ ಮರಣ ಹೊಂದಿದ್ದರು. ಅವರ ಶವಸಂಸ್ಕಾರಕ್ಕೆ ತೆರಳಿದ್ದ ಐವರು ಕಾರ್ಯ ಮುಗಿಸಿ ಕಾರಿನಲ್ಲಿ ಹಿಂದಿರುಗುವಾಗ ಎದುರು ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ.
ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುವನ್ನು ಜಾಲಹಳ್ಳಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಪಬ್ಜಿ ಬ್ಯಾನ್​ ಆದ್ರೇನಂತೆ ಫೌಜಿ ಇದೆಯಲ್ಲ; ಬೆಂಗಳೂರು ಮೂಲದ ಸಂಸ್ಥೆಯ ಕಾರ್ಯಕ್ಕೆ ಅಕ್ಷಯ್​ ಮೆಚ್ಚುಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
