ರಾಯಚೂರು:ಇಬ್ಬರಿಗೂ ಬೇರೆ ಮದುವೆಯಾಗಿದ್ದರೂ ಅಕ್ರಮ ಸಂಬಂಧದಲ್ಲಿದ್ದ ಪ್ರೇಮಿಗಳಿಬ್ಬರು ವೈಮನಸ್ಸಿನಿಂದಾಗಿ ನೇಣಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮದಲ್ಲಿ ನಡೆದಿದೆ.
ರಂಗಣ್ಣ ನಾಯಕ್ (30) ಮತ್ತು ರಂಗಮ್ಮ (18) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಮದುವೆಯಾಗಿ ಆರು ವರ್ಷವಾದರೂ ರಂಗಣ್ಣ ನಾಯಕ್​ಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಚಪ್ಪರ ಗುಂಡಿ ಮಸೀದಿ ಗ್ರಾಮದ ರಂಗಮ್ಮ ಜತೆ ಅಕ್ರಮ ಸಂಬಂಧ ಬೆಳೆಸಿದ್ದ. ರಂಗಮ್ಮ ಸಹ ವಿವಾಹವಾಗಿದ್ದಳು. ಆಕೆಯ ಪತಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾನೆ. ತವರು ಮನೆಯಲ್ಲಿ ಉಳಿದುಕೊಂಡಿದ್ದ ರಂಗಮ್ಮ, ರಂಗಣ್ಣ ನಾಯಕ್ ಜತೆ ಅಕ್ರಮ ಸಂಬಂಧ ಹೊಂದಿದ್ದಳು.
ಇದನ್ನೂ ಓದಿ:ಸೆಕ್ಸ್​ ವೇಳೆ ದುರಂತ ಸಾವಿಗೀಡಾದ ವ್ಯಕ್ತಿ: ಮರಣೋತ್ತರ ವರದಿಯಲ್ಲಿತ್ತು ಬೆಚ್ಚಿಬೀಳಿಸೋ ಸಂಗತಿ!
ಜಾತ್ರೆಯ ನಿಮಿತ್ತ ರಂಗಣ್ಣನ ಪತ್ನಿ ಶಿವಮ್ಮ ತನ್ನ ತವರುಮನೆ ಕೊತ್ತದೊಡ್ಡಿ ಗ್ರಾಮಕ್ಕೆ ಹೋಗಿದ್ದಳು. ಈ ವೇಳೆ ರಂಗಣ್ಣನ ಮನೆಗೆ ರಂಗಮ್ಮ ಬಂದಿದ್ದಾಳೆ. ಈ ವೇಳೆ ಇಬ್ಬರ ನುಡವೆ ವೈಮನಸ್ಸು ಉಂಟಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಪತಿಯ ಸಾವಿನ ಬಳಿಕವಷ್ಟೇ ಪತ್ನಿ ಶಿವಮ್ಮಳಿಗೆ ಅಕ್ರಮ ಸಂಬಂಧದ ಬಗ್ಗೆ ತಿಳಿದುಬಂದಿದೆ. ಮೃತನ ಪತ್ನಿ ಶಿವಮ್ಮಳ ಹೇಳಿಕೆ ಆಧಾರದ ಮೇಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಪತ್ನಿಯನ್ನ ಜಾತ್ರೆಗೆ ಕಳಿಸಿ ಮನೆಗೆ ಬಂದವ ಪರಸ್ತ್ರೀ ಜತೆ ಹೆಣವಾದ! ಆ ಕೋಣೆಯಲ್ಲಿ ನಡೆದಿದ್ದೇನು?

ರಾತ್ರಿ ಫೋನ್ ಕಾಲ್​ ಬಂದ ಬೆನ್ನಲ್ಲೇ ತೆರಳಿದ ಅಪ್ರಾಪ್ತೆ ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಶವವಾಗಿ ಪತ್ತೆ!

ಬಾಯ್​ಫ್ರೆಂಡ್​ ಇಲ್ಲದವರಿಗೆ ಕಾಲೇಜಿಗೆ ಪ್ರವೇಶವಿಲ್ಲ! ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − nine =
Remember me
