ರಾಯಚೂರು:ಮಂತ್ರಾಯಲದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹಮ್ಮಿಕೊಂಡಿರುವ ಶ್ರೀ ರಾಘವೇಂದ್ರತೀರ್ಥ ಗುರುಸಾರ್ವಭೌಮರ 353ನೇ ಆರಾಧನಾ ಮಹೋತ್ಸವಕ್ಕೆ ಭಾನುವಾರ ಸಂಜೆ ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ ಗೋ, ಅಶ್ವ, ಪೂಜೆ ಹಾಗೂ ಭಗವಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಇದನ್ನೂ ಓದಿ:ಮಂತ್ರಾಲಯದಲ್ಲಿ ಪ್ರವಾಹದ ಭೀತಿಯಿಲ್ಲ, ಭಕ್ತರು ನಿರಾತಂಕವಾಗಿ ರಾಯರ ದರ್ಶನ ಮಾಡಬಹುದು: ಸುಭುಧೇಂದ್ರತೀರ್ಥರು
ಇದಕ್ಕೂ ಮೊದಲು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ ಅನುಗ್ರಹ ಸಂದೇಶ ನೀಡಿದ ಶ್ರೀಗಳು, ಕಲಿಯುಗದ ಕಾಮದೇನು, ಕಲ್ಪವೃಕ್ಷರಾದ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸದ ಅಂಗವಾಗಿ ಸಪ್ತರಾತ್ರೋತ್ಸವ ಆರಂಭವಾಗಿದೆ. ಈಗಾಗಲೇ ಗೋಪೂಜೆ, ಅಶ್ವಪೂಜೆ, ಧ್ವಜವಂದನೆ, ದ್ವಜಪೂಜೆ ಹಾಗೂ ಧ್ವಜಾರೋಹಣ ಕಾರ್ಯಕ್ರಮಗಳು ಸಂಪನ್ನಗೊಂಡಿದ್ದು, ದೇಶ ಮತ್ತು ವಿದೇಶಗಳಲ್ಲಿರು ರಾಘವೇಂದ್ರ ಸ್ವಾಮಿಗಳ ಮಠಗಳು, ಸನ್ನಿಧಾನಗಳಲ್ಲಿ ವೈಭವದಿಂಸ ಆರಾಧನಾ ಮಹೋತ್ಸವ ಜರುಗಲಿದೆ ಎಂದರು.
ಎಲ್ಲ ಕಡೆಗಳಲ್ಲಿ ನಡೆಯುವ ರಾಯರ ಆರಾಧನೆಗೆ ಗುರುರಾಯರ ಪೂರ್ಣ ಅನುಗ್ರಹವಿರಲಿದ್ದು, ಎಲ್ಲ ಭಕ್ತರಿಗೂ ಶ್ರೇಯಸ್ಸಾಗಲಿ ಮತ್ತು ಆರಾಧನೆ ಮಹೋತ್ಸವ ನಿರ್ವಿಘ್ನವಾಗಿ ಜರುಗಲಿ. ಮಂತ್ರಾಲಯ ಮಠಕ್ಕೆ ಬರುವ ಭಕ್ತರಿಗೆ ವಸತಿ, ಭೋಜನ, ಶೀಘ್ರ ದರ್ಶನ, ಕುಡಿಯುವ ನೀರಿನ ವ್ಯವಸ್ಥೆ, ವಯುದ್ಯಕೀಯ ಸೇವೆ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ: ಶ್ರೀಸುಬುಧೇಂದ್ರತೀರ್ಥ ಸ್ವಾಮೀಜಿ
ಭಕ್ತರು ನಿರಾತಂಕವಾಗಿ ಮಠಕ್ಕೆ ಆಗಮಿಸಿ, ಸಪ್ತ ರಾತ್ರೋತ್ಸವ ಹಾಗೂ ಆರಧನಾ ಮಹೋತ್ಸವದಲ್ಲಿ ಪಾಲ್ಗೊಂಡು ಗುರುರಾಯರ ದರ್ಶನ ಹಾಗೂ ಅನುಗ್ರಹವನ್ನು ಪಡೆಯಬೇಕು ಎಂದು ಶ್ರೀಗಳು ಅನುಗ್ರಹ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಮಠದ ವ್ಯವಸ್ಥಾಪಕರಾದ ಶ್ರೀನಿವಾಸ್ ರಾವ್, ವೆಂಕಟೇಶ ಜೋಷಿ, ಸಹಾಯಕ ವ್ಯವಸ್ಥಾಪಕ ಐ.ಪಿ ನರಸಿಂಹಾಚಾರ್, ಪ್ರಮುಖರಾದ ವಾದಿರಾಜ ಆಚಾರ್ಯ ಸೇರಿದಂತೆ ಶ್ರೀಮಠದ ಅಧಿಕಾರಿಗಳು, ಭಕ್ತರು ಇದ್ದರು. ಸೇರಿದಂತೆ ಭಕ್ತರು ಇದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:6 + 14 =
Remember me
