ಸುವರ್ಣ ರಥೋತ್ಸವ ಅದ್ದೂರಿ
ರಾಯಚೂರು:ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಗುರುರಾಯರ 350ನೇ ಆರಾಧನೆ ಮಹೋತ್ಸವದ ಮಧ್ಯಾರಾಧನೆ ದಿನವಾದ ಮಂಗಳವಾರ ರಾಯರ ಮೂಲ ಬೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಪ್ರತಿವರ್ಷದಂತೆ ತಿರುಮಲ ತಿರುಪತಿ ದೇವಸ್ಥಾನದಿಂದ ಶೇಷವಸ್ತ್ರವನ್ನು ಟಿಟಿಡಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾರೆಡ್ಡಿ ಮಂತ್ರಾಲಯಕ್ಕೆ ತೆಗೆದುಕೊಂಡು ಬಂದಾಗ ಸಕಲ ಮಂಗಳವಾದ್ಯಗಳೊಂದಿಗೆ ಬರಮಾಡಿಕೊಂಡ ಪೀಠಾಧಿಪತಿ ಶ್ರೀ ಡಾ.ಸುಬುಧೇಂದ್ರ ತೀರ್ಥರು, ಶೇಷವಸ್ತ್ರವನ್ನು ರಾಯರ ಮೂಲ ಬೃಂದಾವನಕ್ಕೆ ಸಮರ್ಪಿಸಿ, ಪಂಚಾಮೃತ ವಿಶೇಷ ಅಭಿಷೇಕ ನಡೆಸಿ ಪೂಜೆ ಸಲ್ಲಿಸಿದರು. ಆನಂತರ ಉತ್ಸವ ಮೂರ್ತಿ ಪ್ರಹ್ಲಾದ ರಾಜರ ಪಾದಪೂಜೆ, ಮೂಲ ರಾಮದೇವರ ಪೂಜೆ ನೆರವೇರಿಸಿ, ಭಕ್ತರಿಗೆ ಫಲ-ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ಆನಂತರ ಸುವರ್ಣ ರಥದಲ್ಲಿ ಗುರುರುರಾಯರ ಪಾದುಕೆಗಳನ್ನಿಟ್ಟು ಶ್ರೀಮಠದ ಪ್ರಾಕಾರದಲ್ಲಿ ರಥೋತ್ಸವ ನಡೆಸಲಾಯಿತು. ಈ ಸಂದರ್ಭ ವಿವಿಧ ಭಜನಾ ಮಂಡಳಿ ಸದಸ್ಯರು, ಚಂಡ ಮದ್ದಳೆ ಸೇರಿದಂತೆ ವಿವಿಧ ವಾದ್ಯ ತಂಡಗಳು ಪಾಲ್ಗೊಳ್ಳುವ ಮೂಲಕ ರಾಯರಿಗೆ ಭಕ್ತಿ ಸಮರ್ಪಣೆ ಮಾಡಲಾಯಿತು. ಶ್ರೀಮಠದ ಆಡಳಿತಾಧಿಕಾರಿ ರೊದ್ದಂ ಪ್ರಭಾಕರರಾವ್, ವ್ಯವಸ್ಥಾಪಕ ವೆಂಕಟೇಶ ಜೋಷಿ, ಸಮನ್ವಯ ವಿಶೇಷಾಧಿಕಾರಿ ಎಸ್.ಕೆ.ಶ್ರೀನಿವಾಸರಾವ್, ನಿವೃತ್ತ ಪ್ರಾಚಾರ್ಯ ಡಾ.ಎನ್.ವಾದಿರಾಜಾಚಾರ್ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − twelve =
Remember me
