ರಾಯಚೂರು:ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ, ಜೆಡಿಎಸ್ ಕುತಂತ್ರ ರಾಜಕಾರಣ ನಡೆಸುತ್ತಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಹೇಳಿದರು.
ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿ, ಮುಡಾ ಹಗರಣವನ್ನು ಮುಚ್ಚಿ ಹಾಕಲು ಕಾಂಗ್ರೆಸ್ ರಾಜ್ಯ ಸರ್ಕಾರ ದರ್ಶನ್ ಕೇಸ್ ಎತ್ತಿ ಹಿಡಿಯುತ್ತಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿಕೆ ನೀಡುತ್ತಿದ್ದು, ಅವರು ಕೇವಲ ಭಾಷಣ ಮಾಡುವುದಕ್ಕೆ ಮಾತ್ರ ಸೀಮಿತ, ಕೆಲಸ ಮಾಡಲು ಬರುವುದಿಲ್ಲ ಅದಕ್ಕಾಗಿಯೇ ಇಲ್ಲ ಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ ಎಂದು ಜೋಶಿಗೆ ತಿರುಗೇಟು ನೀಡಿದರು.
ಇದನ್ನೂ ಓದಿ:ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಸೂಚನೆ; ಕಾಮಗಾರಿ ಆರಂಭಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯಭವನವನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳುತ್ತಿದ್ದು, ದುಡ್ಡು ಕೊಟ್ಟು ಶಾಸಕರನ್ನು ಕೊಂಡುಕೊಳ್ಳುವ ಪ್ರಯತ್ನದಿಂದ ವಿಫಲರಾಗಿದ್ದಾರೆ. ಇದೀಗ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವ ಕೆಲಸಕ್ಕೆ ಈ ಎರಡೂ ಪಕ್ಷಗಳು ಮುಂದಾಗಿವೆ ಎಂದರು.
ಯಡಿಯೂರಪ್ಪ 2500 ಕೋಟಿ ದುಡ್ಡು ಕೊಟ್ಟು ಸಿಎಂ ಆಗಿದ್ದಾರೆ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ನೀಡುತ್ತಿದ್ದು. ಮೊದಲು ಅದರ ಬಗ್ಗೆ ಬಿಜೆಪಿ ಪಕ್ಷ ಉತ್ತರ ನೀಡಬೇಕು. ಪಕ್ಷದಲ್ಲಿ ನಾಲ್ಕಕ್ಕೂ ಹೆಚ್ಚಿನ ಬಣಗಳನ್ನು ಬಿಜೆಪಿ ಹೊಂದಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಆಪರೇಷನ್ ಕಮಲ ವಿಫಲವಾಗಲಿದೆ: ಎನ್.ಎಸ್ ಬೋಸರಾಜು
ಸಿದ್ದರಾಮಯ್ಯ ಅವರನ್ನು ಸುಳ್ಳು ಕೇಸ್‌ಗಳಲ್ಲಿ ಸಿಕ್ಕಿಸಿ ದುರ್ಬಲಗೊಳಿಸುವ ಕಾರ್ಯಕ್ಕೆ ಬೆಜೆಪಿ, ಜೆಡಿಎಸ್ ಪಕ್ಷಗಳು ಎಲ್ಲಿಲ್ಲದ ಪ್ರಯತ್ನ ನಡೆಸುತ್ತಿವೆ. ಆದರೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಎಂದಿಗೂ ವೀಕ್ ಆಗುವುದಿಲ್ಲ. ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಉಳಿಯಲಿದ್ದಾರೆ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen + fifteen =
Remember me
