ರಾಯಚೂರು:ಮೂರು ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿ ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಲಿಂಗಸೂಗೂರು ತಾಲೂಕಿನ ಗೋಲಪಲ್ಲಿ ಬಳಿಯ ಜೇವರ್ಗ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನ‌ ದೇವದುರ್ಗ ಮೂಲದ ಹರ್ಷಿತಾ (18) ಹಾಗೂ ಭುವನ (16) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿರಿ:ಫ್ರೆಂಡ್ಸ್​ ಜತೆ ಡ್ಯಾನ್ಸ್​ ಮಾಡಲು ಗಂಡನ ಒತ್ತಾಯ: ನಾಲ್ಕನೇ ಬಾರಿ ಕೈಕೊಟ್ಟ ಅದೃಷ್ಟ, ಮಹಿಳೆ ದುರಂತ ಸಾವು!
ಲಾರಿ ಹಿಂಬದಿಯಲ್ಲಿ ಬರುತ್ತಿದ್ದ ಕಾರಿಗೆ ಅದರ ಹಿಂದೆ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಇದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ನೋಡುಗರ ಕಣ್ಣುಗಳನ್ನು ಕನ್ಫ್ಯೂಸ್​ ಮಾಡುವ ಚಿತ್ರವಿದು: ಇದೇನಿರಬಹುದು ಹೇಳಬಲ್ಲಿರಾ?

ಸಚಿನ್​ ಪರವಾಗಿ ನಿಮ್ಮನ್ನು ನಿಂದಿಸಿದೆವು ಕ್ಷಮೆ ಇರಲಿ ಮರಿಯಾ: 2015ರ ಘಟನೆಗೆ ಕೇರಳಿಗರ ಕ್ಷಮೆ!

ಒಂದೇ ಗಂಟೆಯಲ್ಲಿ ₹365 ಕೋಟಿ ದುಡಿಯುವ ಆಸೆಯೆ? ಹಾಗಿದ್ದರೆ ಇಲ್ಲಿದೆ ನಿಮಗೊಂದು ಚಾಲೆಂಜ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + fourteen =
Remember me
