ರಾಯಚೂರು:ಮಹಿಳಾ ಪಿಎಸ್​ಐ ಕಿರುಕುಳ ತಾಳಲಾರದೇ ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಸಿರವಾರದಲ್ಲಿ ನಡೆದಿದೆ. ತಾಯಣ್ಣ ನೀಲಗಲ್ ನಾಪತ್ತೆಯಾದ ಯುವಕ.
ಸಿರವಾರ ಠಾಣೆಯ ಪಿಎಸ್​ಐ ಗೀತಾಂಜಲಿ ಶಿಂಧೆ ಅವರು ಮೂರು ತಿಂಗಳಿಂದ ವಿನಾಕಾರಣ ಠಾಣೆಗೆ ಕರೆಸಿ ನನಗೆ ಕಿರುಕುಳ ನೀಡುತ್ತಿದ್ದರು ಎಂದು ತಾಯಣ್ಣ ಆರೋಪ ಮಾಡಿದ್ದಾನೆ.
ಸಂಬಂಧಿಕರ ಜಮೀನಿನ ಭತ್ತ ಕಟಾವು ಮಾಡಿದ್ದ ಆರೋಪವನ್ನು ತಾಯಣ್ಣ ಹೊತ್ತಿದ್ದ. ದೂರು ನೀಡಿದ ಹಿನ್ನೆಲೆಯಲ್ಲಿ ನಿನ್ನೆ (ಡಿ.02) ತಾಯಣ್ಣನನ್ನು ಪಿಎಸ್​ಐ ಗೀತಾಂಜಲಿ ಶಿಂಧೆ ಠಾಣೆಗೆ ಕರೆಸಿದ್ದರು. ಬಹಳ ಹೊತ್ತು ಲಾಕಪ್​ನಲ್ಲಿ ಕೂರಿಸಿದ್ದರಿಂದ ಮನ‌ನೊಂದು ನಾಪತ್ತೆತಾಗಿರುವುದಾಗಿ ಯುವಕ ಡೆತ್​ನೋಟ್​ನಲ್ಲಿ ಉಲ್ಲೇಖಸಿದ್ದಾನೆ.
ಸದ್ಯ ನಾಪತ್ತೆಯಾಗಿರುವ ತಾಯಣ್ಣನ ವಿರುದ್ಧ 4 ಕ್ರಿಮಿನಲ್ ಹಾಗೂ 5 ಸಿವಿಲ್ ಪ್ರಕರಣಗಳಿರುವ ಮಾಹಿತಿ ಇದೆ.
ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಇದಕ್ಕೆ ಪಿಎಸ್​ಐ ಗೀತಾಂಜಲಿ ಶಿಂಧೆ ಅವರೇ ಕಾರಣ. ನನಗೆ ನಿರಂತರ ಕಿರುಕುಳ ನೀಡುತ್ತಿದ್ದು, ದೌರ್ಜನ್ಯ ಎಸಗುತ್ತಿದ್ದಾರೆ. ಇದರಿಂದ ಭಯಭೀತನಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನಗೆ ಹೊರಗಡೆ ಹೋದಾಗಲೆಲ್ಲ ಜೀಪ್​ ನಿಲ್ಲಿಸಿ, ನನಗೆ ಹೊಡೆದಂತಹ ಅನೇಕ ಪ್ರಸಂಗಗಳು ಇವೆ. ಅದನ್ನು ಈವರೆಗೂ ನಾನು ಯಾರಿಗೂ ಹೇಳಿಕೊಂಡಿರಲಿಲ್ಲ. ಇದೀಗ ನಾನು ಬಹಳಷ್ಟು ನೊಂದಿದ್ದೇನೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ.
ನಿನ್ನೆ ಸಾಯಂಕಾಲ ನನ್ನನ್ನು ಠಾಣೆಗೆ ಕರೆಸಿದರು. ನಾನು ಮಾವನ ಮನೆಯಿಂದ ನೇರವಾಗಿ ಪೊಲೀಸ್​ ಠಾಣೆಗೆ ಹೋದೆ. ಆದರೆ, ನನ್ನನ್ನು ವಿಚಾರಣೆ ಮಾಡದೇ ಲಾಕಪ್​ನಲ್ಲಿ ಕೆಲ ಕಾಲ ಕೂರಿಸಿ ಹಿಂಸೆ ನೀಡಿದರು. ಸ್ವಲ್ಪ ಸಮಯದ ಬಳಿಕ ನನ್ನನ್ನು ಬಿಡುಗಡೆ ಮಾಡಿದರು. ಆದರೆ, ಯಾವುದೇ ವಿಚಾರಣೆ ಮಾತ್ರ ಮಾಡಲಿಲ್ಲ. ಇದರಿಂದ ನಾನು ಬಹಳ ನೊಂದಿದ್ದೇನೆ. ನನ್ನನ್ನು ಏಕಾಏಕಿ ಲಾಕಪ್​ನಲ್ಲಿ ಹಾಕಿದ್ದಾರೆ. ಇದು ತುಂಬಾ ನೋವಾಗಿದೆ.
ಗೀತಾಂಜಲಿ ಅವರು ನನಗೆ 3 ತಿಂಗಳಿಂದ ತುಂಬಾ ಚಿತ್ರಹಿಂಸೆ ನೀಡುತ್ತಿದ್ದಾರೆ. ಯಾವ ದಾರಿಯಲ್ಲೂ ಕಂಡರೂ ಒದ್ದು ಒಳಗೆ ಹಾಕುತ್ತೇನೆ ಎಂದು ಬೆದರಿಸಿದ್ದಾರೆ. ಇದನ್ನು ನಾನು ಯಾರಿಗೂ ಹೇಳಲಾಗದೇ ಮನಸ್ಸಿನಲ್ಲೇ ಕೊರಗುತ್ತಿದ್ದೇನೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಎರಡು ಪುಟಗಳ ಸುದೀರ್ಘ ಡೆತ್​ ನೋಟ್​ ಬರೆದಿರುವ ತಾಯಣ್ಣ ಕೊನೆಯಲ್ಲಿ ನನ್ನ ಎಲ್ಲ ಕುಟುಂಬ ಸದಸ್ಯರನ್ನು ನಾನು ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಇದೇ ನನ್ನ ಕೊನೆಯ ಬರಹ ನೋಡಿಕೊಳ್ಳಿ. ಮಿಸ್​ ಯು ಅಮ್ಮ ಎಂದು ಬರೆದಿದ್ದಾನೆ.(ದಿಗ್ವಿಜಯ ನ್ಯೂಸ್​)
ಪ್ರವಾಹದ ಜತೆಗೆ ಕಸ-ಕಡ್ಡಿ ಬರೋದು ಸಹಜ: ರೌಡಿ ರಾಜಕೀಯ ಕುರಿತು ಸಿಟಿ ರವಿ ವ್ಯಾಖ್ಯಾನ

ಪತಿಯ ಸ್ನೇಹಿತನ ಜತೆ 2ನೇ ಮದುವೆಗೆ ತಯಾರಿ! ನಟಿ ಮೀನಾ ಕೊಟ್ಟ ಸ್ಪಷ್ಟನೆ ಇಲ್ಲಿದೆ…

ಕಿರುತೆರೆ ಜೊತೆ ಹಿರಿತೆರೆ ಜೊತೆಯಲಿ; ಡಬಲ್ ರೈಡಿಂಗ್​ನಲ್ಲಿ ತ್ರಿಬಲ್ ರೈಡಿಂಗ್ ಮೇಘಾ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:2 + seventeen =
Remember me
