ರಾಯಚೂರು:ಜಿಲ್ಲೆಯಾದ್ಯಂತ ಕರೊನಾ ಅಟ್ಟಹಾಸ ಮುಂದುವರೆದಿದ್ದರೂ ಲಾಕ್​ಡೌನ್​ ನಿಯಮಕ್ಕೆ ಕ್ಯಾರೆ ಎನ್ನದೇ ಒರಿಯಂಟೇಷನ್ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿ ವಿದ್ಯಾರ್ಥಿಗಳು ಒಟ್ಟಿಗೆ ಹೆಜ್ಜೆ ಹಾಕಿದ ಪ್ರಕರಣ ಬೆಳಕಿಗೆ ಬಂದಿದ್ದು, ಕಾರ್ಯಕ್ರಮ ಆಯೋಜಿಸಿದ ಖಾಸಗಿ ಕಾಲೇಜಿನ ವಿರುದ್ಧ ನೋಟಿಸ್​ ಜಾರಿಯಾಗಿದೆ.
ಲಾಕ್​ಡೌನ್​ ಹಿನ್ನೆಲೆಯಲ್ಲಿ ಶಾಲಾ‌ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಆದರೆ, ಇದಕ್ಕೆ ಸೊಪ್ಪು ಹಾಕದೇ ಮಾನ್ವಿಯ ಲೊಯೋಲಾ ಕಾಲೇಜಿನಲ್ಲಿ ಒರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ವೇಳೆ ಸಾಮಾಜಿಕ ಅಂತರವನ್ನು ಕಾಪಾಡದೇ ಕುಣಿದು ಕುಪ್ಪಳಿಸಿದ್ದಾರೆ. ಯಾರೊಬ್ಬರೂ ಸಹ ಮಾಸ್ಕ್ ಧರಿಸಿರಲಿಲ್ಲ. ಇದೀಗ ಕಾಲೇಜು ಆಡಳಿತ ಮಂಡಳಿಯ ಕಾರ್ಯ ವೈಖರಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.ಇದನ್ನೂ ಓದಿ:ಚಿರುಗೆ ಮೊದಲೇ ಸಾವಿನ ಸುಳಿವಿತ್ತಾ?: ಲಾಕ್​ಡೌನ್​ ನಡುವೆಯೇ ಹೀಗ್ಯಾಕಂದಿದ್ರು…
ನೋಟಿಸ್​ ಜಾರಿಕೋವಿಡ್ ನಿಯಮ ಉಲ್ಲಂಘಿಸಿ ಸಾಮೂಹಿಕ ನೃತ್ಯ ಆಯೋಜಿಸಿದ್ದ ಕಾಲೇಜು ಕುರಿತು ದಿಗ್ವಿಜಯ 24X7 ನ್ಯೂಸ್​ ವಿಸ್ತೃತ ವರದಿ ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಕಾಲೇಜಿಗೆ ನೋಟಿಸ್ ನೀಡಿದೆ. 24 ಗಂಟೆಯೊಳಗೆ ಉತ್ತರಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
https://www.facebook.com/VVani4U/videos/771093613655594/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 17 =
Remember me
