ರಾಯಚೂರು:ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳಿಬ್ಬರು ಸೋಮವಾರ ಬೆಳಗ್ಗೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮಾನ್ವಿ ತಾಲೂಕಿನ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ಭಾನುವಾರ ಮಧ್ಯಾಹ್ನ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ಮಕ್ಕಳನ್ನು ವರುಣ್ (9) ಹಾಗೂ ಸಣ್ಣಯ್ಯ (5) ಎಂದು ಗುರುತಿಸಲಾಗಿದೆ. ಆಟವಾಡಲು ಹೋದಾಗ ಇಬ್ಬರು ನಾಪತ್ತೆಯಾಗಿದ್ದರು. ನಿನ್ನೆಯಿಂದ ಸಿರವಾರ ಹಾಗೂ ಕವಿತಾಳ ಪೋಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಆದರೆ, ನಿನ್ನೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಇದನ್ನೂ ಓದಿರಿ:ಶಾಹೀದ್​ ಅಫ್ರಿದಿ ಮಗಳಿಗೆ ಶಾದಿ ಭಾಗ್ಯ: ಪಾಕ್​ ಕ್ರಿಕೆಟ್​ ತಂಡದ ಆಟಗಾರನೇ ವರ!
ಇಂದು ಸಹ ಶೋಧ ಕಾರ್ಯ ಮುಂದುವರಿಸಿದಾಗ ಬಾಲಕರಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮಕ್ಕಳ ಸಾವಿನ ಸುದ್ದಿ ಕೇಳಿದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಸಿರವಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಬಿಗ್​ಬಾಸ್​ನಿಂದ ಧನುಶ್ರೀ ಔಟ್​: ಟಿಕ್​ಟಾಕ್​ ಬೆಡಗಿಯ ಎಲಿಮಿನೇಷನ್​ಗೆ ಕಾರಣ ಇದೆನಾ?

ಹಳ್ಳಿ ಪಕ್ಕದ ನಾಲೆಯಲ್ಲಿ ಪತ್ತೆಯಾಯ್ತು ಭಾರೀ ಗಾತ್ರದ ತಿಮಿಂಗಿಲ ಶಾರ್ಕ್​ ಕಳೇಬರ!

‘ನೋಡು ಶಿವ’; ಭಗವಾನ್​ಗಿಷ್ಟ ಈ ಶಿವ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − ten =
Remember me
