ರಾಯಚೂರು:ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಧಾರುಣ ಸಾವಿಗೀಡಾಗಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದೆ. ಅಪಘಾತವಾದ್ರೂ ಲಾರಿ ನಿಲ್ಲಿಸದೇ ಬೈಕ್​ ಸಮೇತ ಸುಮಾರು ಅರ್ಧ ಕಿಲೋ ಮೀಟರ್ ದೂರ ಲಾರಿ ಚಲಿಸಿದೆ. ಇಬ್ಬರ ಮೃತದೇಹಗಳು ಅಪಘಾತ ಸ್ಥಳದಿಂದ 200 ಮೀಟರ್ ಅಂತರದಲ್ಲಿ ಬಿದ್ದಿದ್ದವು. ಮೃತರ ಹೆಸರು ಹಾಗೂ ವಿಳಾಸ ತಿಳಿದಬರಬೇಕಿದೆ. ಗಂಭೀರ ಗಾಯಗೊಂಡಿದ್ದ ಓರ್ವ ಮಹಿಳೆಯನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇದನ್ನೂ ಓದಿ:ಪಕ್ಕದಲ್ಲೇ ಮನೆಯಿದ್ರೂ ಲಾಡ್ಜ್​ನಲ್ಲಿ ರೂಮ್​ ಪಡೆದ ಮಹಿಳೆ: ಸಂಶಯದಿ ಬಾಗಿಲು ತೆರೆದವರಿಗೆ ಕಾದಿತ್ತು ಶಾಕ್​!
ಲಾರಿ ಚಾಲಕ ಮದ್ಯ ಸೇವಿಸಿದ್ದೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದ್ದು, ಮದ್ಯಪಾನ ಮಾಡಿ ಮೇಲೇಳದ ಸ್ಥಿತಿಯಲ್ಲಿದ್ದ ಲಾರಿ ಚಾಲಕನನ್ನು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಪಘಾತ ಸಂಬಂಧ ಮಾನ್ವಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ನನ್ನ ಮೊದಲ ಕಾರು ಹುಡುಕಲು ನೆರವಾಗಿ, ಅಭಿಮಾನಿಗಳಿಗೆ ಸಚಿನ್​ ತೆಂಡುಲ್ಕರ್​ ಮೊರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − six =
Remember me
