ಬೆಂಗಳೂರು:ಬೆಂಗಳೂರು ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು (NIA) ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಅದರಂತೆ ತನಿಖೆಯ ಭಾಗವಾಗಿ ಬೆಂಗಳೂರು, ಶಿವಮೊಗ್ಗ ಹುಬ್ಬಳಿಯಲ್ಲಿ ಏಕಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಧಿಕಾರಿಗಳು ಐದು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​ ಟಿಕೆಟ್​ ಕಗ್ಗಂಟು; ಅಭ್ಯರ್ಥಿಗಳ ಆಯ್ಕೆಗೆ ಸಿಇಸಿ ಸಭೆ ಕರೆದ ಎಐಸಿಸಿ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಸೇರಿದಂತೆ 5 ಕಡೆ ದಾಳಿ ಮಾಡಲಾಗಿದೆ. ಅಬ್ದುಲ್ ಮತೀನ್, ಬಾಂಬರ್ ಮುಸಾವೀರ್ ಹುಸೇನ್, ಬಾಂಬರ್‌ಗೆ ಸಹಾಯ ಮಾಡಿದ ಸರ್ದಾರ್ ನವೀದ್ ಸೇರಿದಂತೆ ಅನೇಕರ ಮನೆ ಮೇಲೆ ದಾಳಿ ಮಾಡಲಾಗಿದೆ. ಬಾಂಬರ್ ಮುಸಾವೀರ್ ಹುಸೇನ್ ಚೆನ್ನೈನಿಂದ ಬಂದಾಗ, ಮತೀನ್‌, ನವೀದ್‌ ಸಹಾಯ ಮಾಡಿದ್ದರು ಎಂದು ಹೇಳಲಾಗಿದೆ. ಸದ್ಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಮಾಹಿತಿ ಕಲೆಹಾಕುತ್ತಿದ್ದಾರೆ.
ಚೆನ್ನೈನ ಮೂರು ಕಡೆ ಕೂಡ ಎನ್​ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಶಂಕಿತರ ಶೋಧ ನಡೆಸಿದೆ. ಉಗ್ರರಿಗೆ ಹಣದ ನೆರವು, ಉಗ್ರರ ಪರ ಹಣ ಸಂಗ್ರಹ ಆರೋಪದ ಮೇಲೆ ಶಂಕಿತರ ಮನೆಗಳಲ್ಲಿ ಶೋಧ ನಡೆಸಿದೆ. ತಮಿಳುನಾಡಿನಲ್ಲಿ ನಡೆದಿರುವ ಎನ್‌ಐಎ ದಾಳಿ ಕೂಡ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ್ದೇ ಆಗಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 15 =
Remember me
