ಬೆಂಗಳೂರು:ನೈಋತ್ಯ ರೈಲ್ವೆಯಲ್ಲಿ ಅನುಷ್ಠಾನಕ್ಕೆ ಬಾಕಿಯಿರುವ 9 ಯೋಜನೆಗಳು ಹಾಗೂ 5 ಡಬ್ಲಿಂಗ್​ ಕಾಮಗಾರಿಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ನಗರದ ಕಂಟೋನ್ಮೆಂಟ್​ (ದಂಡು ರೈಲ್ವೆ) ನಿಲ್ದಾಣದಲ್ಲಿ ಸೋಮವಾರ ರೈಲ್ವೆ ವಿಭಾಗದ ಅಧಿಕಾರಿಗಳ ಜತೆ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪರಿಶೀಲಿಸಿದ್ದೇನೆ. ತುಮಕೂರು-ರಾಯದುರ್ಗ-ಕಲ್ಯಾಣದುರ್ಗ, ತುಮಕೂರು-ಚಿತ್ರದುರ್ಗ-ದಾವಣಗೆರೆ, ಗಿಣಿಗೇರಿ-ರಾಯಚೂರು, ಬಾಗಲಕೋಟೆ-ಕುಡಚಿ, ಗದಗ-ವಾಡಿ, ಕಡೂರು-ಚಿಕ್ಕಮಗಳೂರು, ಶಿವಮೊಗ್ಗ-ಶಿಕಾರಿಪುರ-ರಾಣಿಬೆನ್ನೂರು, ಬೆಳಗಾವಿ-ಧಾರವಾಡ-ಕಿತ್ತೂರು, ಹಾಸನ-ಬೇಲೂರು ಮಾರ್ಗದ ಅಭಿವೃದ್ಧಿ ಕಾರ್ಯಗಳು 1995-96, 2010-11, 2004-05ರಿಂದ ಬಾಕಿ ಇವೆ ಎಂದು ಮಾಹಿತಿ ನೀಡಿದರು.
ಹೊಟ್ಗಿ-ಕುಡ್ಗಿ-ಗದಗ, ಯಶವಂತಪುರ-ಚನ್ನಸಂದ್ರ, ಬೈಯ್ಯಪ್ಪನಹಳ್ಳಿ-ಹೊಸೂರು, ಬೆಂಗಳೂರು-ವೈಟ್​ಫೀಲ್ಡ್​, ಹೊಸಪೇಟೆ-ಹುಬ್ಬಳ್ಳಿ, ಲೋಂಡಾ-ವಾಸ್ಕೋ ಡ ಗಾಮ ಮಾರ್ಗದ ದ್ವಿಪಥಿಕರಣ ಯೋಜನೆಯಡಿ 289 ಕಿ.ಮೀ. ಹೊಸ ಮಾರ್ಗ ಸೇರಿ ಒಟ್ಟು 707 ಕಿ.ಮೀ. ಡಬ್ಲಿಂಗ್​ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ, ರೈಲು ಸಂಚಾರ ಪ್ರಾರಂಭಿಸಲು ಅನುವು ಮಾಡಿಕೊಡಲಾಗುತ್ತದೆ. ಜತೆಗೆ ಲೆವೆಲ್​ ಕ್ರಾಸಿಂಗ್​, ಅಂಡರ್​ ಪಾಸ್​, ಬ್ರಿಜ್ಡ್​ ಎಲ್ಲ ಕಾಮಗಾರಿ ಪೂರ್ಣ ಮಾಡಲಾಗುತ್ತದೆ ಎಂದರು.
ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್​ಆರ್​ಪಿ)ಯನ್ನು ಕಾರ್ಯರೂಪಕ್ಕೆ ತರಲು ಅಗತ್ಯವಿರುವ ಕೆಲಸಗಳನ್ನು ಮಾಡುತ್ತೇನೆ. ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ (ಕೆ-ರೈಡ್​)ಕ್ಕೆ ತಾಂತ್ರಿಕ ತಜ್ಞರನ್ನು ನೇಮಿಸುವಂತೆ ರೈಲ್ವೆ ಇಲಾಖೆಯಿಂದ ಪತ್ರ ರವಾನೆಯಾಗಿದೆ. ಈ ಬಗ್ಗೆ ಅಧಿಸೂಚನೆ ಸಿದ್ಧವಾಗುತ್ತಿದ್ದು, ಮುಂದಿನ 15 ದಿನಗಳಲ್ಲಿ ಪೂರ್ಣಕಾಲಿಕ ವ್ಯವಸ್ಥಾಪಕ ನಿರ್ದೇಶಕರ ನೇಮಕವಾಗುತ್ತದೆ ಎಂದು ತಿಳಿಸಿದರು.
ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್​ ಮೋಹನ್​, ಮುಖ್ಯ ಆಡಳಿತಾಧಿಕಾರಿ ರಾಮಗೋಪಾಲ್​ ಮತ್ತು ಇತರ ಅಧಿಕಾರಿಗಳು ಸಭೆಯಲ್ಲಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − three =
Remember me
