ಬೆಂಗಳೂರು:ಹಲವು ದಿನಗಳವರೆಗೆ ಸತಾಯಿಸಿದ ಮಳೆರಾಯ ಈಗೀಗ ಹಲವೆಡೆ ತಂಪೆರೆಯುವ ಮೂಲಕ ರೈತರ ಮುಖದಲ್ಲಿ ಮತ್ತೆ ಭರವಸೆ ಮೂಡಿಸಿದ್ದಾನೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರ್ಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗಲಿದೆ.
ಇದನ್ನೂ ಓದಿ:ನೆಟ್​ ಬೌಲರ್​ಗಳು ಬೇಕಾಗಿದ್ದಾರೆ! ಭಾರತೀಯರಿಗಾಗಿ ನೆದರ್ಲೆಂಡ್​ ತಂಡದಿಂದ ವಿಶೇಷ ಅವಕಾಶ…
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕನ್ಯತ್ವ ಕಳೆದುಕೊಳ್ಳಲು ಸರಿಯಾದ ವಯಸ್ಸು ಎಷ್ಟು? ಬೋಲ್ಡ್​ ಉತ್ತರ ನೀಡಿದ ನಟಿ ಅತುಲ್ಯಾ

ವಿಶ್ವಕಪ್​ ಉದ್ಘಾಟನಾ ಪಂದ್ಯಕ್ಕೆ ಕನ್ನಡಿಗ ಜಾವಗಲ್​ ಶ್ರೀನಾಥ್​ ರೆಫ್ರಿ

ನಿಮ್ಮ ಥೈರಾಯ್ಡ್​ ಗ್ರಂಥಿಯನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ನೀವು ಗಮನದಲ್ಲಿಡಬೇಕಾದ ಅಂಶಗಳಿವು…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four − one =
Remember me
