ಬೆಂಗಳೂರು:ರಾಜ್ಯದಲ್ಲಿ ವರ್ಷವೈಭವ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಭಾರೀ ಮಳೆ ಮುಂದುವರಿಕೆ ಆಗಲಿದೆ. ಶುಕ್ರವಾರದಿಂದ ಮತ್ತೆ 2 ದಿನ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.
ಕಳೆದ ಎರಡು ವಾರದಿಂದ ಸತತವಾಗಿ ಮಳೆ ಸುರಿಯಾಲಾರಂಭಿಸಿದ್ದು, ಕರಾವಳಿ ಭಾಗದ ಹೆಚ್ಚಿನ ಕಡೆ ಜನರು ಸಮಸ್ಯೆಗೆ ಒಳಗಾಗಿದ್ದಾರೆ. ಹತ್ತಾರು ಕಡೆ ಗುಡ್ಡ ಕುಸಿತದ ಜತೆಗೆ ಮನೆಗಳು ಕೂಡ ಕುಸಿದಿವೆ. ಅರಬ್ಬಿ ಸಮುದ್ರದಲ್ಲಿ ಎತ್ತರದ ಅಲೆಗಳು ತೀರ ಪ್ರದೇಶಕ್ಕೆ ಅಪ್ಪಳಿಸುತ್ತಿದ್ದು, ಮೀನುಗಾರರು ಸಾಗರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇತ್ತ, ಮಲೆನಾಡಿನ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ನದಿಗೆ ನೀರು ಹರಿಸಲಾಗುತ್ತಿದೆ. ಈ ಭಾಗದಲ್ಲಿ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಅಬ್ಬರಿಸುತ್ತಿದೆ. ನದಿಗಳ ಸಮೀಪವಿರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಮಳೆ ಹಾಗೂ ಕೆಲಮಟ್ಟಿಗೆ ಪ್ರವಾಹದ ನೀರಿನಿಂದ ಪ್ರವಾಸಿಗರು ಮತ್ತು ಭಕ್ತರನ್ನು ಕಾಡುವ ಸ್ಥಿತಿ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿರುವ ಕಾರಣ ಆರೆಂಜ್ ಅಲರ್ಟ್ ನೀಡಲಾಗಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲೂ ವರ್ಷಧಾರೆ ಸುರಿಯುತ್ತಿದೆ. ಈ ವಾರಾಂತ್ಯದ ಬಳಿಕ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆ ತುಸು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − two =
Remember me
