ಬೆಂಗಳೂರು:ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ.ಚಿತ್ರದುರ್ಗದ ಹಿರಿಯೂರು, ಬೆಂ.ಗ್ರಾಮಾಂತರದ ಹೆಸರುಟ್ಟ,ಕೊಡಗಿನ ಕೋಣಿಗೊಪ್ಪ, ಶಿವಮೊಗ್ಗದ ಆಗುಂಬೆ, ದಣ ಕನ್ನಡದ ಮಂಗಳೂರು, ಚಿಕ್ಕಮಗಳೂರಿನ ಮೂಡಗೆರೆ, ತುಮಕೂರಿನ ಚಿಕ್ಕನಾಯಕಹಳ್ಳಿ, ದಾವಣಗೆರೆ, ಬೆಂಗಳೂರು ನಗರದ ಮಾದವಾರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ಮಳೆ ಬಿದ್ದಿದೆ. ದಣ ಕನ್ನಡ, ಉಡುಪಿಯಲ್ಲಿ ಭಾನುವಾರ (ಮೇ 26) ಭಾರಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ.
ಮಲೆನಾಡು, ದಣ ಕರ್ನಾಟಕ ಭಾಗದಲ್ಲಿ ಸುರಿಯುತ್ತಿದ್ದ ಮಳೆ ತುಸು ಣಿಸಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿಯಲ್ಲಿ ಗುಡುಗು ಮಿಂಚು ಸಹಿತ ಮುಂದಿನ ಎರಡು ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಸರ್ಕಾರಕ್ಕೆ ಹೈಕೋರ್ಟ್ ಸೂಚನೆ : ಮಾರ್ಚ್ ಬಳಿಕ ಆಗಿಲ್ಲ ರೇಸ್
ರಾಜ್ಯದಲ್ಲಿ ಮುಂದಿನ ಐದು ದಿನ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಕೆಲ ಜಿಲ್ಲೆಗಳಲ್ಲಿ ಮಳೆ ಜತೆಗೆ ಬಿರುಗಾಳಿಯೂ ಬೀಸಲಿದೆ.ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕ್ರಮವಾಗಿ 32 ಡಿ.ಸೆ ಮತ್ತು 22 ಡಿ.ಸೆ. ದಾಖಲಾಗುವ ಸಾಧ್ಯತೆ ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 20 =
Remember me
