
ಬೆಂಗಳೂರು:ಭಾರೀ ಮಳೆಯಿಂದಾಗಿ ಲೈಟ್ ಕಂಬ, ಟ್ರಾನ್‌ಸ್ಾರ‌್ಮರ್, ವಿದ್ಯುತ್ ತಂತಿ ಹಾನಿಗೊಳಗಾಗಿದ್ದು, ಎಸ್ಕಾಂಗಳಿಗೆ 96.66 ಕೋಟಿ ರೂ. ನಷ್ಟವಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.ಅತಿವೃಷ್ಠಿಯಿಂದಾಗಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಪರಿಸ್ಥಿತಿಗಳ ಕುರಿತು ಎಲ್ಲಾ ಎಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಿಗೊಳಗಾಗಿರುವ ಕಡೆಯಲ್ಲಿ ದುರಸ್ತಿಗೊಳಿಸುವ ಕಾರ್ಯ ಸಮಾರೋಪಾದಿಯಲ್ಲಿ ನಡೆದಿದೆ ಎಂದರು.ಮಳೆ ಮತ್ತು ಗಾಳಿಯಿಂದಾಗಿ 53,816 ಕಂಬಗಳು, 3,924 ಟ್ರಾನ್ಸ್‌ಫಾರ್ಮರ್‌ಗಳು, 1,120 ಕಿ.ಮೀ. ವಿದ್ಯುತ್ ತಂತಿಗಳು ಹಾನಿಯಾಗಿದೆ. ಈ ಪೈಕಿ 51,119 ಕಂಬಗಳು, 3,918 ಟ್ರಾನ್ಸ್‌ಫಾರ್ಮರ್‌ಗಳು, 1,063 ಕಿ.ಮೀ. ವಿದ್ಯುತ್ ತಂತಿಗಳನ್ನು ದುರಸ್ತಿಗೊಳಿಸುವ ಕಾರ್ಯ ಪೂರ್ಣಗೊಂಡಿದೆ ಎಂದರು.ದುರಸ್ತಿಗೆ ಎಸ್ಕಾಂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಭಾರಿ ಮಳೆ ಬೀಳುತ್ತಿರುವ ಮಲೆನಾಡು, ಕರಾವಳಿ ಮತ್ತು ಬೆಳಗಾವಿ ಭಾಗಗಳಲ್ಲಿ ನೀರಿನ ಮಧ್ಯೆಯೂ ಕೆಲಸ ಮಾಡುತ್ತಿದ್ದಾರೆ. ಹೆಚ್ಚು ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಹೆಚ್ಚುವರಿ ಗ್ಯಾಂಗ್ ಮೆನ್, ಲೈನ್ ಮೆನ್‌ಗಳನ್ನು ನೇಮಿಸುವುದರ ಜತೆಗೆ ಗುತ್ತಿಗೆದಾರರ ನೆರವಿನೊಂದಿಗೆ ತಂಡಗಳನ್ನು ಮಾಡಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ವಿದ್ಯುತ್ ಮರು ಸಂಪರ್ಕಕ್ಕೆ ಕಂಬಗಳು, ಕಂಡಕ್ಟರ್‌ಗಳು, ತಂತಿಗಳ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದರು.ತುರ್ತು ಪರಿಸ್ಥಿತಿಗೆ ಸ್ಪಂದಿಸಲು ಅನುಕೂಲವಾಗುವಂತೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಹಾರ ಕಾರ್ಯ ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಕುಸುಮ್ – ಜಂಟಿ ಸರ್ವೇಕೃಷಿಗೆ ಸೌರ ಪಂಪ್‌ಸೆಟ್‌ಗಳನ್ನು ಒದಗಿಸುವ ಕುಸುಮ್ ಬಿ ಯೋಜನೆಯಡಿ ಆನ್‌ಲೈನ್ ಮೂಲಕ 26,238 ಅರ್ಜಿಗಳು ಬಂದಿವೆ. ಈ ಹಿಂದಿನ ಅನಧಿಕೃತ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ಕೋರಿ 10,073 ಅರ್ಜಿಗಳು ಬಂದಿದ್ದು ಪರಿಶೀಲಿಸಲಾಗುತ್ತಿದೆ ಎಂದರು.ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿರುವವರ ಪಂಪ್ ಸೆಟ್‌ಗಳು ಗ್ರಿಡ್‌ನಿಂದ 500 ಮೀಟರ್ ಒಳಗೆ ಇದ್ದರೆ ವಿದ್ಯುತ್ ಪಂಪ್ ಸೆಟ್ ಒದಗಿಸಲಾಗುವುದು. ಉಳಿದವರಿಗೆ ಸೌರ ಪಂಪ್ ಸೆಟ್ ಒದಗಿಸಲಾಗುವುದು. ಇದಕ್ಕೆ ಫಲಾನುಭವಿಗಳು ಶೇ. 20ರಷ್ಟು ಅನುದಾನ ಭರಿಸಿದರೆ ಉಳಿದ ಶೇ. 30ರಷ್ಟನ್ನು ಕೇಂದ್ರ ಸರ್ಕಾರ ಮತ್ತು ಶೇ. 50ನ್ನು ರಾಜ್ಯ ಸರ್ಕಾರ ಭರಿಸಲಿದೆ. ಅರ್ಜಿಗಳ ಸರ್ವೇ ಕಾರ್ಯ ಮುಗಿದ ಕೂಡಲೇ ಪಂಪ್ ಸೆಟ್ ಒದಗಿಸಲಾಗುವುದು ಎಂದರು.ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶತಕ ಕೆ.ಪಿ.ರುದ್ರಪ್ಪಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 12 =
Remember me
