ಬೆಂಗಳೂರು/ ಕಲಬುರಗಿ:ರಾಜ್ಯದಲ್ಲಿ ಮುಂಗಾರು ಆರ್ಭಟ ಮುಂದುವರಿದಿದ್ದು, ಇನ್ನೂ 5 ದಿನ ಮಳೆ ಮುಂದುವರಿಯಲಿದೆ. ಕರಾವಳಿಯ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿಯಲ್ಲಿ ಮುಂದಿನ 24 ಗಂಟೆ ಆರೆಂಜ್ ಹಾಗೂ ರಾಯಚೂರು, ಯಾದಗಿರಿಯಲ್ಲಿ ಸೆ.16ರಂದು ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಸೆ.19 ನಂತರ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದ.ಕ, ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಮಳೆ ಸ್ವಲ್ಪ ಚುರುಕಾಗಿದ್ದು, ವಿವಿಧೆಡೆ ಸಾಧಾರಣದಿಂದ ಉತ್ತಮ ಮಳೆ ಸುರಿದಿದೆ.
ನಲುಗಿದ ಕಲಬುರಗಿ:ಕಲಬುರಗಿ ಜಿಲ್ಲಾದ್ಯಂತ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗ್ಗಿನ ಜಾವದವರೆಗೆ ಅಬ್ಬರದ ಮಳೆ ಸುರಿದಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ಹೊಕ್ಕಿದ್ದು, ನಿದ್ದೆ ಇಲ್ಲದೆ ಜಾಗರಣೆ ಮಾಡಬೇಕಾಯಿತು. ನಗರದಲ್ಲಿ ಮನೆಯೊಂದು ಕುಸಿದು ನಾಲ್ವರು ಗಾಯಗೊಂಡಿದ್ದಾರೆ.ಇದನ್ನೂ ಓದಿ:15ನೇ ಶತಮಾನದ ಶ್ರೀರಾಮ-ಸೀತಾ-ಲಕ್ಷ್ಮಣನ ವಿಗ್ರಹಗಳನ್ನು ಹಸ್ತಾಂತರಿಸಿದ ಯುಕೆ; ಯಾವಾಗ ಕಳವಾಗಿದ್ದವು ಗೊತ್ತಾ?
ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಹಳ್ಳದ ಪ್ರವಾಹದಿಂದ ಬಹುತೇಕ ಜಲಾವೃತಗೊಂಡಿತ್ತು. ಜಿಲ್ಲೆಯ 11 ತಾಲೂಕುಗಳಲ್ಲಿ ಭರ್ಜರಿ ಮಳೆಯಾಗಿದ್ದರಿಂದ ಬೆಳೆಗಳು ನೀರಿನಲ್ಲಿ ನಿಂತಿದ್ದು, ರೈತರು ಕಂಗಾಲಾಗಿದ್ದಾರೆ. ಕಲಬುರಗಿ-ಕಾಳಗಿ ನಡುವಿನ ವಚ್ಚಾ ಬಳಿ ಹಳ್ಳ ತುಂಬಿ ಹರಿಯುತ್ತಿದ್ದರಿಂದ ರಾಜ್ಯ ಹೆದ್ದಾರಿ ಸಂಚಾರ ಬಂದ್ ಆಗಿತ್ತು.
ಬೀದರ್ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿದಿದೆ. ಐದಾರು ಗಂಟೆ ಅವಧಿಯಲ್ಲಿ ಸರಾಸರಿ 57 ಮಿಮೀ (ಸಾಮಾನ್ಯ ಮಳೆ 5 ಮಿಮೀ) ಮಳೆಯಾಗಿದೆ. ಭಾಲ್ಕಿ ಮತ್ತು ಹುಮನಾಬಾದ್ ತಾಲೂಕಿನಲ್ಲಿ ವರುಣಾರ್ಭಟ ಜೋರಾಗಿದೆ. ಇವೆರಡೂ ತಾಲೂಕಿನಲ್ಲಿ ಒಂದೇ ರಾತ್ರಿ 75 ಮಿಮೀ ಮಳೆ ಸುರಿದಿದೆ. ಅಲ್ಲಲ್ಲಿ ಹಳ್ಳ-ಕೊಳ್ಳಗಳು ತುಂಬಿದ್ದು, ಸಣ್ಣ ಸೇತುವೆಗಳು ಜಲಾವೃತಗೊಂಡು 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಕಟಾವಿಗೆ ಬಂದ ಉದ್ದು ಸೇರಿ ವಿವಿಧ ಬೆಳೆಗಳು ಹಾನಿಗೀಡಾಗಿವೆ. ಮಾಂಜ್ರಾ ನದಿಗೆ ಹೆಚ್ಚಿನ ನೀರು ಹರಿದುಬರುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ವಿಜಯಪುರ, ಯಾದಗಿರಿಯಲ್ಲೂ ಧಾರಾಕಾರ ಮಳೆಯಾಗಿದೆ.
ಒಂಟಿ ದಾರಿಹೋಕರೇ ಇವರ ಟಾರ್ಗೆಟ್​- ಮೈಸೂರಿನ ಖತರ್ನಾಕ್​ ಗ್ಯಾಂಗ್​ ಅರೆಸ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 7 =
Remember me
