ಕೋಲಾರ:ಮುಂಬರುವ ವಿಧಾನಸಭೆ ಚುನಾವಣೆಯನ್ನೇ ಗುರಿಯಾಗಿಸಿಕೊಂಡು ಜೆಡಿಎಸ್​ ಆರಂಭಿಸಿದ ಪಂಚರತ್ನ ಯಾತ್ರೆಗೆ ಮಳೆ ಅಡ್ಡಿಯಾಗಿದೆ. ಮುಳಬಾಗಿಲಿನ ಕುರುಡುಮಲೆ ಮಹಾಗಣಪತಿ ದೇವಸ್ಥಾನದಲ್ಲಿ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ನಿಖಿಲ್​ ಕುಮಾರಸ್ವಾಮಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರೂ ಆದ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಯಾತ್ರೆಗೆ ಇಂದು(ನ,1) ಚಾಲನೆ ನೀಡಿದರು. ಬಳಿಕ ನಡಯಬೇಕಿದ್ದ ಬೃಹತ್​ ಸಮಾವೇಶ ಮಳೆ ಹಿನ್ನೆಲೆ ರದ್ದಾಗಿದೆ.
ಮುಳಬಾಗಿಲು ಪಟ್ಟಣದ ಬೈಪಾಸ್ ಬಳಿ ಇಂದು ನಡೆಯಬೇಕಿದ್ದ ಜೆಡಿಎಸ್​ ಸಮಾವೇಶ ರದ್ದಾಗಿದೆ. ನಿರಂತರ ಮಳೆ ಬೀಳುತ್ತಿರುವ ಹಿನ್ನೆಲೆ ಸಮಾವೇಶ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳನ್ನು ಇಂದಿನಿಂದ ಐದು ದಿನಗಳ ವರೆಗೆ ಮುಂದೂಡಲಾಗಿದೆ. ರಾಜ್ಯದ ವಿವಿಧೆಡೆಯಿಂದ ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಮುಳಬಾಗಿಲಿಗೆ ಸಮಾವೇಶಕ್ಕೆ ಆಗಮಿಸಿದ್ದರು. ಎಲ್ಲರೂ ಮಳೆಗೆ ಹಿಡಿ ಶಾಪ ಹಾಕುತ್ತ ವಾಪಸ್ ತೆರಳಲುತ್ತಿದ್ದ ದೃಶ್ಯ ಕಂಡು ಬಂತು.
ಡಿಸೆಂಬರ್​ 6ರವರೆಗೆ ಒಟ್ಟು 36 ವಿಧಾನಸಭಾ ಕ್ಷೇತ್ರಗಳಲ್ಲಿ ರಥಯಾತ್ರೆ ಸಂಚರಿಸಲಿದೆ. ಪ್ರತಿ ತಾಲೂಕಿನಲ್ಲಿ ಆರು ಸಣ್ಣ ಸಭೆ, ಮೂರು ಸಾರ್ವಜನಿಕ ಸಭೆ ನಡೆಸುವುದಲ್ಲದೇ ಸಾರ್ವಜನಿಕರು, ರೈತರೊಂದಿಗೆ ಮಾತುಕತೆ ನಡೆಸುವುದು, ಪ್ರತಿ ವಿಧಾನಸಭಾ ಕ್ಷೇತ್ರದ ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಹೂಡುವ ಯೋಜನೆ ಜೆಡಿಎಸ್​ದ್ದು. ಮಳೆಯಿಂದಾಗಿ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ.
ಪಂಚರತ್ನ ಎಂದರೆ?:ಪಂಚರತ್ನ ಎಂದರೆ ಅದು ಕೇವಲ ಘೋಷಣೆ ಅಲ್ಲ. ಎಲ್ಲರಿಗೂ ಉಚಿತ ಶಿಕ್ಷಣ, ಆರೋಗ್ಯ, ವಿದ್ಯುತ್​, ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ, ಪ್ರತಿ ಕುಟುಂಬಕ್ಕೆ ಯಾವುದಾದರೊಂದು ಉದ್ಯೋಗ, ಸ್ವಂತ ಉದ್ಯೋಗ ಕಲ್ಪಿಸುವ ಮೂಲಕ ಆರ್ಥಿಕ ಬಲವನ್ನು ತುಂಬುವುದು, ಪ್ರತಿಯೊಬ್ಬರಿಗೂ ಸೂರು ಒದಗಿಸುವುದು ಇದರ ಉದ್ದೇಶ.
ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿ ಚುನಾವಣೆಗೆ ರಣಕಹಳೆ ಮೊಳಗಿಸಿದ ಜೆಡಿಎಸ್​

ನನ್ನನ್ನು ಮುಗಿಸಲು ಮುಧೋಳ-ಬೆಂಗಳೂರಿಂದ ಗ್ಯಾಂಗ್​ ಬಂದಿತ್ತು: ಹೊಸ ಬಾಂಬ್​ ಸಿಡಿಸಿದ ಯತ್ನಾಳ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
