ಬೆಂಗಳೂರು:ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 5 ದಿನ ಮುಂದುವರಿಯಲಿದೆ. ಗುರುವಾರ ಹಲವು ಭಾಗಗಳಲ್ಲಿ ಧಾರಾಕಾರ ವರ್ಷಧಾರೆಯಾಗಿದ್ದು, ಕೊಡಗಿನ ನಾಪೊಕ್ಲು 12 ಸೆಂ.ಮೀ, ರಾಮನಗರ 9 ಸೆಂ.ಮೀ, ತುಮಕೂರಿನ ತುರುವೇಕರೆ 8 ಸೆಂ.ಮೀ ಮಳೆ ಬಿದ್ದಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಆ.5ರಂದು ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ ಮತ್ತು ಹಾಸನದಲ್ಲಿ ಮುಂದಿನ 24 ಗಂಟೆ ಆರೆಂಜ್ ಅಲರ್ಟ್ ಇರಲಿದೆ. ಅಲ್ಲದೆ, ಈ ಜಿಲ್ಲೆಗಳಲ್ಲಿ ಹಾಗೂ ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಆ.6ರಂದು ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಮುಂದಿನ ಮೂರು ದಿನಗಳ ಬಳಿಕ ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮಳೆ ತುಸು ಇಳಿಕೆಯಾಗಲಿದೆ. ಪ್ರಸ್ತುತ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಜೂ 1ರಿಂದ ಆ.4ರವರೆಗೆ 506 ಮಿಮೀ ಮಳೆಯಾಗಬೇಕಿತ್ತು. ಆದರೆ, 610 ಮಿಮೀ ಮಳೆಯಾಗಿದ್ದು, ಶೇ.21 ವಾಡಿಕೆಗಿಂತ ಹೆಚ್ಚು ಸುರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ರೂಲ್ಸ್​: ದ್ವಿಚಕ್ರ ವಾಹನದಲ್ಲಿ ಡಬಲ್ ರೈಡ್​ಗೆ ಬ್ರೇಕ್​..!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 − six =
Remember me
