ಬೆಂಗಳೂರು:ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸುರಿಯುವ ಸಾಧ್ಯತೆ ಇದೆ. ಶುಕ್ರವಾರ ಕೆಲವೆಡೆ ಸಾಧಾರಣ ಮಳೆ ಬಿದ್ದಿದೆ. ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಏ.1ರಿಂದ ಏ.5ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಕಲಬುರಗಿಯಲ್ಲಿ ಗರಿಷ್ಠ ತಾಪಮಾನದಲ್ಲಿ 38.7 ಉಷ್ಣಾಂಶ ದಾಖಲೆಯಾಗಿದೆ. ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನದಲ್ಲಿ 14.2 ಉಷ್ಣಾಂಶ ಇತ್ತು. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಸರಾಸರಿ 2 ಡಿಗ್ರಿ ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ:ಪ್ಯಾನ್​-ಆಧಾರ್ ಲಿಂಕ್ ಗಡುವು ವಿಸ್ತರಣೆ: ನೀವೀಗ ಮಾಡಬೇಕಾದ್ದೇನು?
ಉತ್ತರ ಒಳನಾಡು ಮತ್ತು ಕರಾವಳಿ ಕೆಲವೆಡೆ ಸರಾಸರಿ 3-4 ಕನಿಷ್ಠ ಉಷ್ಣಾಂಶ ಇಳಿಕೆಯಾಗಲಿದೆ. ಮುಂದಿನ 48 ಗಂಟೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
