ಜೇವರ್ಗಿ:ರಾಜ್ಯ ವಿಧಅನಸಭೆ ಚುನವಾಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಸಬೆ, ಸಮಾವೇಶಗಳನ್ನು ಮಾಡುವ ಮೂಲಕ ಭರ್ಜರಿ ಮತಬೇಟೆಯಲ್ಲಿ ತೊಡಗಿದ್ದಾರೆ.
ಇನ್ನು ಶುಕ್ರವಾರ ಕಲಬುರ್ಗಿ ಜಿಲ್ಲೆಯ ಜೇರ್ವಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ನೋಡಲು ಜನರು ಮಳೆಯ ನಡುವೆ ಕಿಕ್ಕಿರಿದು ಸೇರಿದ್ದು ವಿಶೇಷವಾಗಿತ್ತು.
ಜಿಲ್ಲೆಯಲ್ಲಿ ಗುಡುಡು ಸಹಿತ ಭಾರಿ ಮಳೆಯಾಗುತ್ತಿದ್ದು ಇದರ ನಡುವೆಯೂ ಸಾವಿರಾರು ಜನರು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ನೋಡಲು ಜೇವರ್ಗಿ ತಾಲ್ಲೂಕು ಕ್ರೀಡಾಂಗಣದಲ್ಲಿ ಜಮಾಯಿಸಿದ್ದರು.
ಭಾರಿ ಮಳೆಯ ನಡುವೆಯೂ ಕೂಡ ಸಮಾವೇಶಕ್ಕೆ ಆಗಮಿಸಿದ ರಾಹುಲ್​ ಗಾಂಧಿ ಸಂಪೂರ್ಣ ವದ್ದೆಯಾಗಿದ್ದ ವೇದಿಕೆಯನ್ನು ಏರಿ ಸಮಾವೇಶವನ್ನು ಉದ್ದೇಶಿಸಿ ರಾಹುಲ್​ ಗಾಂಧಿ ಭಾಷಣ ಮಾಡಿದ್ಧಾರೆ.

ನಿರಂತರ ಮಳೆಯ ನಡುವೆಯೂ ಭಾಷಣ ಮಾಡಿದ ರಾಹುಲ್​ ಗಾಂಧಿ ಕಾಂಗ್ರೆಸ್​ ಅಧಿಕಾರಿಕ್ಕೆ ಬಂದರೆ ಈಗಾಗಲೇ ಘೋಷಿಸಿರುವ ಗ್ಯಾರಂಟಿ ಕಾರ್ಡ್​ಗಳನ್ನು ಜಾರಿಗೆ ತರಲಾಗುವುದು. ಇದಕ್ಕಾದರೂ ನೀವು ಕಾಂಗ್ರೆಸ್​ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ವಿನಂತಿಸಿದ್ದಾರೆ.
ಇದನ್ನೂ ಒದಿ:ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಜಾಗ ಕೇಳಿದ ಕಾನೂನು ವಿವಿ
ಇನ್ನು ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್​ ಅಭ್ಯರ್ಥಿ ಡಾ. ಅಜಯ್​ ಸಿಂಗ್ ಮಳೆ ಬರುತ್ತಿರುವುದು ಒಳ್ಳೆಯ ಸಂಕೇತವಾಗಿದ್ದು ಇದು ರೈತರಿಗೆ ಶುಭ ಸೂಚನೆಯಾಗಿದೆ. ಈ ಮೂಲಕ ರಾಜ್ಯವನ್ನು ಆಳಿದ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಒಂದು ದೊಡ್ಡ ವೇದಿಕೆಯಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 11 =
Remember me
