ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಶುಕ್ರವಾರವೂ ಮಳೆ ಅಬ್ಬರ ಹೆಚ್ಚಾಗಿತ್ತು.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಜ.9ರಿಂದ ಮುಂದಿನ ಎರಡು ದಿನ ಹಾಗೂ ಚಿತ್ರದುರ್ಗ, ಕೋಲಾರ ಮತ್ತು ತುಮಕೂರಿನಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ಕೊಪ್ಪಳದಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕೆಲ ಭಾಗಗಳಲ್ಲಿ ಅಲ್ಲಲ್ಲಿ ಚುದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.
ತಾಯಿ-ತಂಗಿ ಮೇಲೆ ಟ್ರ್ಯಾಕ್ಟರ್​ ಹರಿಸಿ ಕೊಂದುಬಿಟ್ಟ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ
ಮಗನ ವಿರುದ್ಧ ದೂರು ಕೊಡಲು ಬಂದವ ಪೊಲೀಸ್​ ಠಾಣೆ ಮುಂದೆಯೇ ನೇಣುಬಿಗಿದುಕೊಂಡ!




ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
