ಮೈಸೂರು:ಇನ್ನೇನು ಬೇಸಿಗೆ ಶುರುವಾಗಬೇಕು. ಆದರೆ ರಾಜ್ಯಾದ್ಯಂತ ಪ್ರತಿದಿನ ಒಂದಲ್ಲ, ಒಂದು ಕಡೆ ಮಳೆಯಾಗುತ್ತಿದೆ. ನಿನ್ನೆ ಬೆಳಗಾವಿ, ದಾವಣಗೆರೆ, ಗದಗ ಮತ್ತಿತರ ಕಡೆಗಳಲ್ಲಿ ಮಳೆಯಾಗಿತ್ತು.
ಇಂದು ಮೈಸೂರಿನಲ್ಲಿ ಮಧ್ಯಾಹ್ನದಿಂದಲೇ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ಇತ್ತು. ಮಧ್ಯಾಹ್ನದ ಹೊತ್ತಿಗೆ ಬಿರುಗಾಳಿ ಸಹಿತ ಜೋರು ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ.
ಹಾಗೇ ಚಾಮರಾಜನಗರದಲ್ಲಿಯೂ ಕೂಡ ಮಳೆಯ ಸಿಂಚನ ಆಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ವರುಣ ತಂಪೆರಿದ್ದಾನೆ. ಸುಮಾರು 20 ನಿಮಿಷಗಳಿಗೂ ಅಧಿಕ ಕಾಲ ಸುರಿದ ಮಳೆಯಿಂದ ರೈತರೂ ಫುಲ್​ ಖುಷಿಯಾಗಿದ್ದಾರೆ. (ದಿಗ್ವಿಜಯ ನ್ಯೂಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
