ಬೆಂಗಳೂರು:ರಾಜ್ಯದಲ್ಲಿ ನಿರೀಕ್ಷೆಯಂತೆ ಉತ್ತಮವಾಗಿ ಪೂರ್ವ ಮುಂಗಾರು ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಏ.12ರಿಂದ ಏ.18ರವರೆಗೆ ವಾಡಿಕೆಯಂತೆ 9 ಮಿಮೀ ಮಳೆ ಬದಲಾಗಿ 21 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.133 ಹೆಚ್ಚು ಮಳೆ ಬಿದ್ದಿದೆ.
ದಕ್ಷಿಣ ಒಳನಾಡಿನಲ್ಲಿ 11 ಮಿಮೀ ಮಳೆಯಾಗಬೇಕಿತ್ತು, ಆದರೆ, 32 ಮಿಮೀ ಮಳೆಯಾಗಿದ್ದು, ಶೇ.186 ಹೆಚ್ಚುವರಿ ಸುರಿದಿದೆ. ಉತ್ತರ ಒಳನಾಡಿನಲ್ಲಿ 7 ಜಿಲ್ಲೆಗಳಲ್ಲಿ ಮಳೆ ಕೊರತೆಯಾದರೂ ವಾಡಿಕೆಯಂತೆ 7 ಮಿಮೀ ಮಳೆ ಬದಲಾಗಿ 10 ಮಿಮೀ ಮಳೆಯಾಗಿದ್ದು, ಶೇ.40 ಹೆಚ್ಚುವರಿ ಮಳೆ ಸುರಿದಿದೆ.
ಅದೇರೀತಿ, ಮಲೆನಾಡಿನಲ್ಲಿ 13 ಮಿಮೀ ಮಳೆಯಾಗಬೇಕಿತ್ತು. ಆದರೆ, 34 ಮಿಮೀ ಮಳೆ ಸುರಿದಿದ್ದು, ಶೇ.162 ಹೆಚ್ಚುವರಿ ಸುರಿದಿದೆ. ಕರಾವಳಿಯಲ್ಲಿ 8 ಮಿಮೀ ಮಳೆ ಬದಲಾಗಿ 24 ಮಿಮೀ ಮಳೆಯಾಗಿದ್ದು, ಶೇ.221 ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. ಒಂದು ವಾರದಲ್ಲಿ ರಾಜ್ಯದ ಇತರೆ ಜಿಲ್ಲೆಗಳಗಿಂತ ಉಡುಪಿ, ಕೋಲಾರ ಮತ್ತು ಬೆಂಗಳೂರಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಇನ್ನೂ 2 ದಿನ ಮಳೆ:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 2 ದಿನ ಮುಂದುವರಿಯಲಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಏ.19,20ರಂದು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹುಬ್ಬಳ್ಳಿ ಗಲಭೆಗೆ ಪ್ರಚೋದನೆ ಕೊಟ್ಟಿದ್ಯಾರು? ಇಲ್ಲಿದೆ ಸುಳಿವು..

ಚಾಲಕನ ಮೇಲಾಟಕ್ಕೆ ಬಲಿಯಾದ ವೃದ್ಧೆ; ಆರೋಪಿ ಪರಾರಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 1 =
Remember me
