ಬೆಂಗಳೂರು:ರಾಜ್ಯದಲ್ಲಿ ಮುಂದಿನ ಎರಡು ದಿನ ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬೀದರ್​, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಚಿಕ್ಕಮಗಳೂರು, ವಿಜಯಪುರದ ಕೆಲ ಪ್ರದೇಶಗಳಲ್ಲಿ ಶುಕ್ರವಾರ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಏ.13ರಿಂದ ಮುಂದಿನ ಎರಡು ದಿನ ಬಿರುಸಾಗಿ ಮಳೆಯಾಗಲಿದೆ. ಏ.15ರಿಂದ ಏ.17ರವರೆಗೆ ಕೆಲವೆಡೆ ಸಾಧಾರಣ ಮಳೆ ಸುರಿದರೆ, ಏ.18ರಿಂದ ಮುಂದಿನ ಎರಡು ದಿನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.
ಉಳ್ಳವರು, ಇಲ್ಲದವರು ಒಂದಾಗಿ ಬಾಳಲು ಸಂವಿಧಾನ ಅವಕಾಶ
ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಶುಕ್ರವಾರ ಭಾಗಶ@ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ,ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶ ತುಸು ಇಳಿಮುಖವಾಯಿತು.ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಮಿಂಚು ಸಹಿತ ಮಳೆ ಸುರಿಯಲಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಗಾಳಿ ವೇಗ ಗಂಟೆಗೆ 30-40 ಕಿ.ಮೀ.ಇರಲಿದೆ. ಮೇಲ್ಮೈ ಮಾರುತಗಳು ರಭಸದಿಂದ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + seventeen =
Remember me
