ಬೆಂಗಳೂರು:ರಾಜ್ಯದ ಹಲವು ಭಾಗಗಳಲ್ಲಿ ಚಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಳಿಯ ಜೊತೆ ಮಳೆಯೂ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೇಶದ ದಕ್ಷಿಣ ಭಾಗದ ಹಲವು ರಾಜ್ಯಗಳಲ್ಲಿ ಅಬ್ಬರದ ಮಳೆಯಾಗುತ್ತಲೇ ಇದ್ದು, ಇದರಿಂದ ಈ ಭಾಗದ ಜನರು ತತ್ತರಿಸಿ ಹೋಗಿದ್ದಾರೆ. ನೆರೆಯ ತಮಿಳುನಾಡು, ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿಯತ್ತಿದೆ.
ಕರ್ನಾಟಕದಲ್ಲಿ ಅಂತಹ ವಾತಾವರಣ ಏನು ಇಲ್ಲ. ಆದರೂ ರಾಜ್ಯದ ಈ ಭಾಗಗಳಲ್ಲಿ ಇನ್ನು ಎರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ತಿಂಗಳು ಚಳಿ ಜತೆ ಮಳೆ ಸಹ ಬರಲಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಚಳಿ ಹೆಚ್ಚಿರಲಿದೆಯಂತೆ. ಬೆಂಗಳೂರಲ್ಲಿ ನಿನ್ನೆ ಪೂರ ಚಳಿಯ ವಾತಾವರಣ ಇತ್ತು. ಮೋಡ ಕವಿದಿತ್ತು. ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಮೈಸೂರು, ಮಂಡ್ಯ ಚಾಮರಾಜನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಹಾಸನ, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆಯದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:twelve − eleven =
Remember me
