ಬೆಂಗಳೂರು:ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ, ಬಿಸಿಲಿನಿಂದ ಬೆಂದ ಜನರಿಗೆ ಮುಂದಿನ ಮೂರ್ನಾಲ್ಕು ದಿನದ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಮಾರ್ಚ್‌ನಿಂದ ಈಚೆಗೆ ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಬೀದರ್‌ ಸಹಿತ ಕೆಲವು ಕಡೆ ಮಳೆಯಾಗಿರುವ ವರದಿಯಾಗಿದೆ.  ಏಪ್ರಿಲ್‌ನಲ್ಲಿ ಕೊಡಗಿನ ಕೆಲವು ಕಡೆಗಳಲ್ಲಿ ಸಾಧಾರಣಾ ಮಳೆ ಸುರಿದಿದೆ.
#ಮಳೆ#ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಗಳಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.#ಮೋಡ#ಪ್ರಕೃತಿ#ಕರ್ನಾಟಕಮಳೆ#ನೀರುಉಳಿಸಿpic.twitter.com/0RWza9z1MI
— Karnataka State Natural Disaster Monitoring Centre (@KarnatakaSNDMC)April 2, 2024

ಹವಾಮಾನ ಇಲಾಖೆಯು ಬಿಡುಗಡೆ ಮಾಡಿರುವ ವರದಿ ಪ್ರಕಾರ, ಯುಗಾದಿ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೀದರ್‌. ಬೆಳಗಾವಿ. ಬಾಗಲಕೋಟೆ, ಹಾಸನ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಯುಗಾದಿ ವೇಳೆ ಅಶ್ವಿನಿ, ಭರಣಿ ಮಳೆಗಳು ಬರಬಹುದು ಎನ್ನುವ ನಿರೀಕ್ಷೆ ರೈತಾಪಿ ವಲಯದ್ದು. ಇದಕ್ಕೆ ಪೂರಕವಾಗಿ ಹವಾಮಾನ ಇಲಾಖೆಯೂ ಮಳೆಯ ಮಾಹಿತಿಯನ್ನು ನೀಡಿದೆ.
ಏಪ್ರಿಲ್‌ 6ರ ಶನಿವಾರದಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ, ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್‌, ಹಳೆ ಮೈಸೂರು ಭಾಗದ ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ.ಏಪ್ರಿಲ್‌ 7ರ ಭಾನುವಾರದಂದು ದಕ್ಷಿಣ ಕನ್ನಡ, ಬೀದರ್‌, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆ ಬೀಳುವ ಮುನ್ಸೂಚನೆಯನ್ನು ನೀಡಲಾಗಿದೆ.ಏಪ್ರಿಲ್‌ 8ರ ಸೋಮವಾರದಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಒಂದರೆಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆಯುನ್ನು ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + nine =
Remember me
