ಬೆಂಗಳೂರು:ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದ್ದು, ನಾಳೆ, ನಾಡಿದ್ದು ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶುಕ್ರವಾರ ಉತ್ತರ ಕನ್ನಡದ ಹೊನ್ನಾವರ 150 ಮಿಮೀ, ಶಿರಾಲಿ 110 ಮಿಮೀ, ಕುಮಟಾ 100 ಮಿಮೀ, ಕದ್ರಾ ಮತ್ತು ಗೋಕರ್ಣ ತಲಾ 70 ಮಿಮೀ, ಉಡುಪಿ 90 ಮಿಮೀ ಹಾಗೂ ಕುಂದಾಪುರ 70 ಮಿಮೀ ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಜೂ 27, 28 ರಂದು ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಜೂ 25, 26ರಂದು ಹಾಗೂ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಡೇಟಿಂಗ್ ಆ್ಯಪ್ ಬೆಡಗಿಗಾಗಿ ಕೋಟಿ ಕೊಟ್ಟು ಕೈ ಸುಟ್ಟುಕೊಂಡ ಬ್ಯಾಂಕ್ ಮ್ಯಾನೇಜರ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + five =
Remember me
