ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಹಲವಡೆ ಮಳೆಯಾಗುತ್ತಿದ್ದು, ಅ. 10ರಿಂದ ಮುಂದಿನ 4 ದಿನ ಭಾರಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ 24 ಗಂಟೆ ಹಾಗೂ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಅ.11ರಿಂದ ಮುಂದಿನ 2 ದಿನ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಬೆಂಗಳೂರು, ಬೆಂ.ಗ್ರಾಮಾಂತರ ಹಾಗೂ ಕೋಲಾರದಲ್ಲಿ ಅ.12ರಂದು ಯೆಲ್ಲೋ ಅಲರ್ಟ್ ಇರಲಿದೆ. ಮುಂಗಾರು ಮಳೆ ಈಗಾಗಲೇ ಮುಗಿದಿದೆ. ಆದರೂ, ರಾಜ್ಯದಲ್ಲಿ ಅ.15ರವರೆಗೆ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:six − four =
Remember me
