ಬೆಂಗಳೂರು:ಪ್ರಸಕ್ತ ತಿಂಗಳಲ್ಲಿ ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ ಕಾಡಿದೆ. 100 ತಾಲೂಕುಗಳಲ್ಲಿ ಮಳೆ ಕುಂಠಿತವಾದರೆ, 87 ತಾಲೂಕುಗಳಲ್ಲಿ ತೀವ್ರವಾಗಿ ಮಳೆ ಅಭಾವ ಉಂಟಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಬಿತ್ತನೆ ಕಾರ್ಯವೂ ಸಂಪೂರ್ಣ ಕುಂಠಿತವಾಗಿದೆ.
ಇದನ್ನೂ ಓದಿ:ಅತ್ಯಂತ ಉದ್ದದ ನಾಲಿಗೆ ಹೊಂದಿರುವ ‘ರಾಕಿ’ ಹೆಸರು ಗಿನ್ನೆಸ್ ದಾಖಲೆಗೆ ಸೇರ್ಪಡೆ!
ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ ಉಂಟಾದರೆ, ಬೆಂಗಳೂರು ನಗರ, ಬೆಂ.ಗ್ರಾಮಾಂತರದಲ್ಲಿ ವಾಡಿಕೆಗಿಂತ ಶೇ.20 ಕಡಿಮೆ ಮಳೆ ಬಿದ್ದಿದೆ. ಜೂ 1 ರಿಂದ ಜೂ 29ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 191 ಮಿ.ಮೀ ಮಳೆಯಾಗಬೇಕಿತ್ತು. ಆದರೆ 81 ಮಿ.ಮೀ ಮಳೆಯಾಗಿದ್ದು, ಶೇ.57ರಷ್ಟು ಕಡಿಮೆ ಸುರಿದಿದೆ. ದಕ್ಷಿಣ ಕರ್ನಾಟಕದಲ್ಲಿ ಶೇ.22, ಉತ್ತರ ಕರ್ನಾಟಕದಲ್ಲಿ ಶೇ. 21, ಮಲೆನಾಡಲ್ಲಿ ಶೇ 64, ಕರಾವಳಿಯಲ್ಲಿ ಶೇ.19 ವಾಡಿಕೆಗಿಂತ ಕಡಿಮೆ ವರ್ಷಧಾರೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಈ ಬಾರಿ ರಾಜ್ಯಕ್ಕೆ ತಡವಾಗಿ ಆಗಮಿಸಿದ್ದ ಮುಂಗಾರು ಆರಂಭದಲ್ಲಿ ದುರ್ಬಲಗೊಂಡಿತ್ತು. ಇದರಿಂದಾಗಿ ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಮೂರ್ನಾಲ್ಕು ವರ್ಷಗಳಿಂದ ಮಳೆ ದಿನಗಳು ಬದಲಾಗುತ್ತಿರುವ ಕಾರಣದಿಂದಾಗಿ 2020 ಮತ್ತು 2022ರ ಜೂನ್‌ನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದರೆ, 2021ರ ಜೂನ್‌ನಲ್ಲಿ ಮಾತ್ರ ವಾಡಿಕೆಯಷ್ಟೇ ಮಳೆ ಸುರಿದಿತ್ತು. ಆದರೆ, ಮೂರು ವರ್ಷಗಳಿಂದಲೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕುಂಠಿತವಾಗಿತ್ತು. ಈ ಬಾರಿಯೂ ಆ ಭಾಗಗಳಲ್ಲಿ ಮಳೆ ಅಭಾವ ಕಾಡಿದೆ. ಅಲ್ಲದೆ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲೂ ವಾಡಿಕೆಗಿಂತ ಕಡಿಮೆ ಬಿದ್ದಿದೆ.
ಇದನ್ನೂ ಓದಿ:ರಸ್ತೆ ತೆರವು ಕಾರ್ಯ ವೇಳೆ ಉರುಳಿ ಬಿದ್ದ ಮರ; ಕೂದಲೆಳೆ ಅಂತರದಲ್ಲಿ ಪಾರಾದ ಶಾಸಕ ಗುರುರಾಜ್ ಗಂಟಿಹೊಳೆ
ರಾಜ್ಯದ ಬಹುತೇಕ ಜಿಲ್ಲೆಗಳು ಮಳೆಯಾಶ್ರಿತ ಕೃಷಿಯನ್ನೇ ಅವಲಂಬಿಸಿವೆ. ಜೂನ್ 4ನೇ ವಾರ ಮುಗಿಯುತ್ತಿದ್ದರೂ ಇದುವರೆಗೆ ವರುಣ ಕೃಪೆ ತೋರಿಲ್ಲ. ಹೀಗಾಗಿ, ಬಿತ್ತನೆ ಚಟುವಟಿಕೆಗೆ ರೈತರ ಉತ್ಸಾಹ ಕುಂದಿದೆ. ಮೇ ತಿಂಗಳಿನಲ್ಲಿ ಅಲ್ಪ ಸ್ವಲ್ಪ ಬಿದ್ದ ಮುಂಗಾರು ಪೂರ್ವ ಮಳೆಯಿಂದಾಗಿ ಜಮೀನು ಹದಗೊಳಿಸಿದ್ದ ರೈತರು ಪ್ರಸಕ್ತ ತಿಂಗಳ ಮೊದಲ ವಾರದಲ್ಲಿ ಬಿತ್ತನೆ ಕಾರ್ಯ ಮಾಡಿದ್ದರು. ಆದರೆ, ಮುಂಗಾರು ಕೈಕೊಟ್ಟ ಪರಿಣಾಮದಿಂದಾಗಿ ಬಿತ್ತನೆ ಮಾಡಿದ್ದ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಇದರಿಂದಾಗಿ ರೈತಾಪಿ ವರ್ಗ ದಯನೀಯ ಪರಿಸ್ಥಿತಿ ಎದುರಿಸುವಂತಾಗಿದೆ.
ರಾಜ್ಯದ ಇತರ ಭಾಗಗಳಗಿಂತ ಕರಾವಳಿಯಲ್ಲಿ ತುಸು ಮುಂಗಾರು ಚುರುಕುಗೊಂಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಐದು ದಿನ ಜೋರಾಗಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + thirteen =
Remember me
