ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 3 ದಿನ ಇನ್ನಷ್ಟು ಬಿರುಸುಗೊಳ್ಳಲಿದೆ. ಶುಕ್ರವಾರ ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆ ಸುರಿದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಏ.16, 17ರಂದು ಗುಡುಗು ಮಿಂಚು ಸಹಿತ ಜೋರು ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಏ.17ರಂದು ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಇದ್ದರೆ, ಏ.16, 18ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅದೇ ರೀತಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಹತ್ತು ವರ್ಷಗಳಲ್ಲಿ ದೇಶದಲ್ಲಾಗಲಿದೆ ಒಂದು ದಾಖಲೆ; ಪ್ರಧಾನಿ ಮೋದಿ ವಿಶ್ವಾಸ

ಆಟವಾಡುತ್ತಿದ್ದಾಗ ಮಹಡಿಯಿಂದ ಕೆಳಕ್ಕೆ ಬಿದ್ದು ನಾಲ್ಕು ವರ್ಷದ ಮಗು ಸಾವು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 + eighteen =
Remember me
