ಬೆಂಗಳೂರು:ರಾಜ್ಯದ ಹಲವೆಡೆ ಮುಂದಿನ 4 ದಿನ ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು,ವಿಜಯನಗರದಲ್ಲಿ ಮೇ 7ರಿಂದ ಮೇ 10ರವರೆಗೆ ಜೋರಾಗಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿಯಲ್ಲಿ ಮೇ 7ರಿಂದ ಮುಂದಿನ ಐದು ದಿನ, ಉತ್ತರ ಕನ್ನಡದಲ್ಲಿ ಮೇ 10ರಿಂದ ಮುಂದಿನ ಮೂರು ದಿನ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರಿನಲ್ಲಿ ಮೇ 8ರಿಂದ ಮೇ 10ರವರೆಗೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.
ಪ್ರಜ್ವಲ್ ಪರ ಮತ ಯಾಚಿಸಿದ್ದನ್ನು ಯಾಕೆ ಮರೆತಿದ್ದೀರಿ ಸಿದ್ದರಾಮಯ್ಯ: ಅಶೋಕ್ ಪ್ರಶ್ನೆ11 ಜಿಲ್ಲೆಯಲ್ಲಿ 40 ದಾಟಿದ ಉಷ್ಣಾಂಶ:ಭಾನುವಾರ ಕಲಬುರಗಿಯಲ್ಲಿ 44.7 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ರಾಯಚೂರು 44.3, ಯಾದಗಿರಿ 44, ಕೊಪ್ಪಳ 43.3, ಬಳ್ಳಾರಿ 43.3, ತುಮಕೂರು 43.1, ವಿಜಯಪುರ 42.5, ಬಾಗಲಕೋಟೆ 42.5, ಬೀದರ್​ 42, ಧಾರವಾಡ 40 ಹಾಗೂ ಬೆಳಗಾವಿ 40 ಡಿ.ಸೆ. ಉಷ್ಣಾಂಶ ವರದಿಯಾಗಿದ್ದು, ಈ ಮೇಲಿನ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 4 ದಿನ ಬಿಸಿ ಗಾಳಿ ಬೀಸಲಿದೆ. ಸತತ 4 ದಿನ ಬಳಿಕ ಬೆಂಗಳೂರಿನಲ್ಲಿ 37 ಡಿ.ಸೆ.ಗೆ ಇಳಿದಿದೆ. ಮೇ 1ರಿಂದ ಮೇ 4ರವರೆಗೆ ನಗರದಲ್ಲಿ ಉಷ್ಣಾಂಶ 40ರ ಗಡಿ ದಾಟಿತ್ತು. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಬಿಸಿ ವಾತಾವರಣ ಇರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
