ಬೆಂಗಳೂರು:ಕ್ಷೀಣಿಸಿದ್ದ ಮುಂಗಾರು ಪ್ರಬಲಗೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ಐದು ದಿನ ಭರ್ಜರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜು.14ರಿಂದ ಜು.15ರವರೆಗೆ ಅತಿ ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ರೆಡ್​ ಅರ್ಲಟ್​ ನೀಡಲಾಗಿದೆ. ಈ ವೇಳೆ 204 ಮಿಮೀ ಮಳೆಯಾಗಲಿದೆ. ಈ ಮೇಲಿನ ಜಿಲ್ಲೆಗಳಲ್ಲಿ ಜು.13 ಮತ್ತು ಜ.16ರಂದು ಆರೆಂಜ್​ ಅರ್ಲಟ್​ ನೀಡಲಾಗಿದೆ. ಪ್ರತಿ ಗಂಟೆಗೆ 55 ಕಿ.ಮೀ.ವೇಗದಲ್ಲಿ ಬೀಸುವ ಬಿರುಗಾಳಿ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧಿಸಲಿದೆ. ದಕ್ಷಿಣ ಕನ್ನಡದ ಮೂಲ್ಕಿಯಿಂದ ಮಂಗಳೂರಿನವರೆಗೆ, ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳವರೆಗೆ, ಉಡುಪಿಯ ಬೈಂದೂರಿನ ಕಾಪುವರೆಗೆ ಹೈ ವೇವ್​ ವಾಚ್​ ಅರ್ಲಟ್​ ನೀಡಲಾಗಿದೆ. ಸಮುದ್ರದಲ್ಲಿ 3 ಮೀಟರ್​ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಕಂಟೇನರ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿ
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿಯೂ ಮುಂದಿನ ಐದು ದಿನ ಜೋರು ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್​ ಅರ್ಲಟ್​ ಕೊಡಲಾಗಿದೆ. ಬೆಳಗಾವಿ, ಕಲಬುರಗಿ, ಯಾದಗಿರಿಯಲ್ಲಿ ಮುಂದಿನ ನಾಲ್ಕು ದಿನ, ರಾಯಚೂರು, ವಿಜಯಪುರ, ಕೊಪ್ಪಳ, ದಾವಣಗೆರೆ, ಹಾಸನ, ಮೈಸೂರಿನಲ್ಲಿ ಜು.15ರಿಂದ ಮುಂದಿನ ಎರಡು ದಿನ ಯೆಲ್ಲೋ ಅರ್ಲಟ್​ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆ ಬೀಳಲಿದೆ. ಬೆಂಗಳೂರಲ್ಲಿ ಮುಂದಿನ 2 ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರತಿ ಗಂಟೆಗೆ ಗಾಳಿ ವೇಗ 40 ಕಿ.ಮೀ.ತಲುಪಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿ.ಸೆ.ಮತ್ತು 21 ಡಿ.ಸೆ. ಇರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
