ಬೆಂಗಳೂರು:ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮಳೆ ಜೂ 16ರಿಂದ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬಾಗಲಕೋಟೆ, ಕೊಪ್ಪಳದ ಗಂಗಾವತಿ, ಶಿವಮೊಗ್ಗದ ಆಗುಂಬೆ, ಚಿಕ್ಕಮಗಳೂರಿನ ಮೂಡಗೆರೆ, ಚಿಕ್ಕಬಳ್ಳಾಪುರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ವರ್ಷಧಾರೆಯಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರಿನಲ್ಲಿ ಜೂ 14ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ಬೆಂಗಳೂರು, ಬೆಂ,ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ಬೀದರ್​, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಮೋದಿ ಸಂಕಲ್ಪದಲ್ಲಿ ಭಾಗಿಯಾಗುವ ಸಂತಸ: ಸಚಿವ ವಿ.ಸೋಮಣ್ಣ
ಜೂ 16ರಿಂದ ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆ ಇಳಿಮುಖವಾಗಲಿದೆ. ಕೆಲವೆಡೆ ಮಾತ್ರ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞ ಡಾ.ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eighteen =
Remember me
