ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ಕೆಲವು ಕಡೆಗಳಲ್ಲಿ ಜೂನ್​ 6ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 6ರ ನಡುವೆ ಬೆಂಗಳೂರಿನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗಲಿನ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಜೋರಾದ ಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಇದೆ. ಜೂನ್ 6ರ ನಡುವೆ ದಕ್ಷಿಣ ಒಳ ಕರ್ನಾಟಕ, ಉತ್ತರ ಒಳ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದ ಭಾಗಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:ಎರಡು ಹೃದಯಗಳನ್ನು ಒಂದು ಮಾಡಿದ ಹಾವು! ಯುವಕ-ಯುವತಿಯ ಪ್ರೀತಿಗೆ ಉರಗನ ನಂಟು
ಈ ವರ್ಷ ನೈಋತ್ಯ ಮುಂಗಾರು ವಿಳಂಬವಾಗಲಿದೆ. ಜೂನ್ 4ಕ್ಕೆ ಕೇರಳದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ ಜೂನ್ ಮೊದಲ ವಾರದಲ್ಲೇ ನೈರುತ್ಯ ಮುಂಗಾರು ಕರ್ನಾಟಕಕ್ಕೆ ಅಪ್ಪಳಿಸಬೇಕು. ಆದರೆ, ಕೇರಳಕ್ಕೆ ತಡವಾಗಿ ಪ್ರವೇಶಿಸುವ ಕಾರಣ ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭ ಕೆಲವು ದಿನಗಳ ಮಟ್ಟಿಗೆ ವಿಳಂಬವಾಗುವ ಸಾಧ್ಯತೆ ಇದೆ.(ದಿಗ್ವಿಜಯ ನ್ಯೂಸ್​)
ರಾಮಲಲ್ಲಾ ಪ್ರಾಣಪ್ರತಿಷ್ಠೆ ಉತ್ಸವ; ಡಿಸೆಂಬರ್ ಅಥವಾ ಜನವರಿಯಲ್ಲಿ ಕಾರ್ಯಕ್ರಮ | ಪ್ರಧಾನಿ ಮೋದಿ ಭಾಗಿ

ಸಂಪಾದಕೀಯ | ದಕ್ಷಿಣ ಕನ್ನಡದಲ್ಲಿ ಎನ್​ಐಎ ದಾಳಿ; ನಿರಂತರ ಕಣ್ಗಾವಲು ಅಗತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
