ಬೆಂಗಳೂರು:ರಾಜ್ಯಾದ್ಯಂತ ಮಳೆ ಚುರುಕಾಗಿದ್ದು, ಬುಧವಾರ ಶಿವಮೊಗ್ಗದ ಆಗುಂಬೆಯಲ್ಲಿ 12 ಸೆಂಮೀ ಬಿದ್ದಿದೆ. ಕೊಡಗಿನ ಗೋಣಿಕೊಪ್ಪ, ಚಿಕ್ಕಮಗಳೂರಿನ ಮೂಡಗೆರೆ, ಬೀದರ್​ನ ಔರದ್​ನಲ್ಲಿ ಧಾರಾಕಾರವಾಗಿ ಸುರಿದಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಜು.6ರಿಂದ ಜು.8ರವರೆಗೆ ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ನೀಡಲಾಗಿದೆ.ಕರ್ನಾಟಕದ ಕರಾವಳಿ ಉದ್ದಕ್ಕೂ ಮತ್ತು ಹೊರಗೆ ಪ್ರತಿ ಗಂಟೆಗೆ 55 ಕಿ.ಮೀ.ವೇಗದಲ್ಲಿ ತೀವ್ರ ಬಿರುಗಾಳಿ ಬೀಸಲಿದೆ. ದಕ್ಷಿಣ ಕನ್ನಡದಿಂದ ಕರಾವಳಿಗೆ, ಮುಲ್ಕಿಯಿಂದ ಮಂಗಳೂರಿನವರೆಗೆ ಹೈ ವೇವ್​ ವಾಚ್​ ಅರ್ಲಟ್​ ನೀಡಲಾಗಿದೆ. ಸಮುದ್ರದಲ್ಲಿ ಎತ್ತರ ಅಲೆಗಳು ಏಳುವ ಹಿನ್ನೆಲೆಯಲ್ಲಿ ಮೀನುಗಾರಿಕೆ ನಡೆಸದಂತೆ, ಸಮುದ್ರ ದಡದಲ್ಲಿ ಪ್ರವಾಸಿಗರ ತೆರಳದಂತೆ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಬೆಳಗಾವಿ, ಧಾರವಾಡದಲ್ಲಿ ಮುಂದಿನ ನಾಲ್ಕು ದಿನ, ಹಾವೇರಿಯಲ್ಲಿ ಜು.6ರಿಂದ ಜು.8ರವರೆಗೆ ಯೆಲ್ಲೋ ಅರ್ಲಟ್​ ಇರಲಿದೆ. ದಕ್ಷಿಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.
40 ಲಕ್ಷ ಹೆಕ್ಟೇರ್​ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣರಾಜ್ಯ ಹವಾಮಾನ ಇಲಾಖೆ ಹಿರಿಯ ಅಧಿಕಾರಿ ಸಿ.ಎಸ್​.ಪಾಟೀಲ್​ ಮಾತನಾಡಿ,ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಮುಂಗಾರು ಚುರುಕಾಗಿದೆ. ಕರಾವಳಿ, ಮಲೆನಾಡಲ್ಲಿ ಈಗಾಗಲೇ ಧಾರಾಕಾರವಾಗಿ ಮಳೆಯಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕೆಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
