ಬೆಂಗಳೂರು:ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಬುಧವಾರ) ಸಂಜೆ ಮಳೆ ತಂಪೆರೆದಿದೆ. ಬೆಂಗಳೂರು ಹಲವು ಕಡೆ ಸಂಜೆ 5 ಗಂಟೆ ಸುಮಾರಿಗೆ ಬಿರುಗಾಳಿ ಸಮೇತ ಆರಂಭವಾದ ಜೋರಾದ ಮಳೆಯಿಂದ ಕೆಲವೆಡೆ ಟ್ರಾಫಿಕ್ ಜಾಮ್ ಸಂಕಷ್ಟ ಕೂಡ ಉಂಟಾಗಿದೆ.
ಇದನ್ನೂ ಓದಿ:ಮಧ್ಯಪ್ರದೇಶ: ಮಗುವಿಗೆ ಜನ್ಮನೀಡಿದ 13 ವರ್ಷದ ಅಪ್ರಾಪ್ತ ಬಾಲಕಿ!
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಘೋಷಿಸುತ್ತಿದ್ದಂತೆ ನಗರದಲ್ಲಿ ಮಳೆ ಸುರಿಯಲಾರಂಭಿಸಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ತಾಪಮಾನವು ಸಾಮಾನ್ಯ ಸ್ಥಿತಿಗೆ ಮರಳಿದ್ದು, ವಾತಾವರಣ ಕೂಲ್ ಆಗಿದೆ.
ನಗರದ ಶಾಂತಿ ನಗರ, ಎಂ.ಜಿ ರಸ್ತೆ, ಕೆ.ಆರ್​ ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಗುಟ್ಟಹಳ್ಳಿ, ವಿಧಾನಸೌಧ ಯಲಹಂಕ, ರಿಚ್​ಮಂಡ್​ಟೌನ್ ಸುತ್ತಮುತ್ತ ಹಾಗೂ ನೆಲಮಂಗಲ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್.ಪುರಂ, ರಾಮಮೂರ್ತಿ ನಗರ ಸುತ್ತಮುತ್ತ ಮಳೆಯಾಗುತ್ತಿದ್ದು, ಸಂಚಾರ ದಟ್ಟನೆ ಉಂಟಾಗಿದೆ ಉಂಟಾಗಿದೆ. ಕೆಲಸ ಮುಗಿಸಿ ಮನೆ ಕಡೆ ಹೊರಟ ವಾಹನ ಸವಾರರು ಪರದಾಡುತ್ತಿದ್ದಾರೆ.ನೆಟಿಜನ್‌ಗಳು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿರುವ ವಿಡಿಯೋಗಳನ್ನು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಲು ಪ್ರಾರಂಭಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಜನಸಂಚಾರ ಅಸ್ತವ್ಯಸ್ತವಾಗಿದೆ. ಹಲವೆಡೆ ಮಳೆಯಿಂದಾಗಿ ಟ್ರಾಫಿಕ್​ ಜಾಮ್​ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಸಂಜೆಯ ಮಳೆಯಿಂದಾಗಿ ದ್ವಿಚಕ್ರ ವಾಹನ ಸಾವರಿಗೆ ಸಮಸ್ಯೆಯಾಗಿದ್ದು, ಗಾಳಿ ಸಹಿತ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಹರಿಯುತ್ತಿದೆ.
ಚಂಡೀಗಢ: ನಾಮಪತ್ರ ಸಲ್ಲಿಸುವ ಮುನ್ನವೇ ಚುನಾವಣಾ ಕಣದಿಂದ ಹಿಂದೆ ಸರಿದ ಅಭ್ಯರ್ಥಿ! ಕಾರಣ ಹೀಗಿದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
